ಬೆಂಗಳೂರು: ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಸಿ. ರಸ್ತೆಯಲ್ಲಿ ನಾಲಾ ರಸ್ತೆ ಜಂಕ್ಷನ್ನಿಂದ ಪುರಭವನ ಜಂಕ್ಷನ್ವರೆಗೆ ವೈಟ್ ಟಾಪಿಂಗ್ ಕಾಮಗಾರಿ ನಡೆಸಲು ಬಿಬಿಎಂಪಿ ಉದ್ದೇಶಿಸಿದ್ದು, ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಭಾಗಶಃ ನಿಷೇಧಿಸಲಾಗಿದೆ.

ಗುರುವಾರದಿಂದಲೇ ಕಾಮಗಾರಿ ಆರಂಭವಾಗಲಿದೆ. ಕಾಮಗಾರಿ ಮುಕ್ತಾಯ ಆಗುವವರೆಗೆ ಈ ಮಾರ್ಗದಲ್ಲಿ ವಾಹನ ಸಂಚಾರ ನಿಧಾನಗತಿಯಲ್ಲಿ ಇರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಸಂಚಾರ ಪೊಲೀಸರು ಕೋರಿದ್ದಾರೆ. ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

ಪರ್ಯಾಯ ಮಾರ್ಗ: ಹೊಸೂರು ರಸ್ತೆಯಿಂದ ಜೆ.ಸಿ. ರಸ್ತೆ ಮೂಲಕ ಮೆಜೆಸ್ಟಿಕ್ ಹಾಗೂ ಬೆಂಗಳೂರು ಉತ್ತರ ದಿಕ್ಕಿನ ಕಡೆಗೆ ಸಂಚರಿಸುತ್ತಿದ್ದ ವಾಹನಗಳು ಲಾಲ್ಬಾಗ್ ಮುಖ್ಯದ್ವಾರದ ಬಳಿ ಬಲಕ್ಕೆ ತಿರುವು ಪಡೆದು ಕೆ.ಎಚ್. ರಸ್ತೆ, ಶಾಂತಿನಗರ, ರಿಚ್ಮಂಡ್ ಆರ್.ಆರ್. ರಸ್ತೆಯ ಮೂಲಕ ಹಡ್ಸನ್ ವೃತ್ತ ತಲುಪಬಹುದಾಗಿದೆ.

ಸೌತ್ ಎಂಡ್ ವೃತ್ತದಿಂದ ಜೆ.ಸಿ. ರಸ್ತೆಯ ಮೂಲಕ ಮೆಜೆಸ್ಟಿಕ್ ಹಾಗೂ ಬೆಂಗಳೂರು ಉತ್ತರ ದಿಕ್ಕಿನ ಕಡೆಗೆ ಸಂಚರಿಸುತ್ತಿದ್ದ ವಾಹನಗಳು, ಮಿನರ್ವ ವೃತ್ತದ ಬಳಿ ಎಡಕ್ಕೆ ತಿರುವು ಪಡೆದು ಲಾಲ್ಬಾಗ್ ಪೋರ್ಟ್ ರಸ್ತೆ ಹಾಗೂ ಕೆ.ಆರ್. ರಸ್ತೆಯ ಮೂಲಕ ಕೆ.ಆರ್. ಮಾರುಕಟ್ಟೆ ತಲುಪಿ ಎಸ್.ಜೆ.ಪಿ. ರಸ್ತೆ, ಪುರಭವನ ಸಂಪರ್ಕ ಪಡೆಯಬಹುದು ಎಂದು ಸಂಚಾರ ಪೊಲೀಸರು ಕೋರಿದ್ದಾರೆ.

ಜೆ.ಸಿ. ರಸ್ತೆಯ ಎರಡೂ ಬದಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.