ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಂಚಣಿಯಲ್ಲಿ ತಾರತಮ್ಯ ವಿರೋಧಿಸಿ ಇದೇ 23ಕ್ಕೆ ಪ್ರತಿಭಟನೆ

Published : 19 ಸೆಪ್ಟೆಂಬರ್ 2024, 15:30 IST
Last Updated : 19 ಸೆಪ್ಟೆಂಬರ್ 2024, 15:30 IST
ಫಾಲೋ ಮಾಡಿ
Comments

ಬೆಂಗಳೂರು: ನಿವೃತ್ತ ನೌಕರರಿಗೆ ಪಿಂಚಣಿ ನೀಡುವುದರಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಇದೇ 23ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬ್ಯಾಂಕ್‌ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯ ಸಮಿತಿ ತಿಳಿಸಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪ್ರಧಾನ ಕಾರ್ಯದರ್ಶಿ ಎ.ಎನ್. ಕೃಷ್ಣಮೂರ್ತಿ, ‘ಕಿರಿಯ ಸಿಬ್ಬಂದಿಗೆ ಹೋಲಿಸಿದರೆ 1992ರಲ್ಲಿ ನಿವೃತ್ತರಾದ ಹಿರಿಯ ಶ್ರೇಣಿಯ ಕಾರ್ಯನಿರ್ವಾಹಕರಿಗೆ ಕಡಿಮೆ ಪಿಂಚಣಿ ನೀಡಲಾಗುತ್ತಿದೆ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಕೈಗೆಟುಕುವ ದರದಲ್ಲಿ ಆರೋಗ್ಯ ವಿಮೆ ಸೌಲಭ್ಯ ದೊರೆಯುತ್ತಿಲ್ಲ. ವಿಮಾ ವೆಚ್ಚವನ್ನು ನಿವೃತ್ತರೇ ಭರಿಸುತ್ತಿದ್ದಾರೆ’ ಎಂದು ದೂರಿದರು.

‘ಸಾರ್ವಜನಿಕ ವಲಯದ ಬ್ಯಾಂಕುಗಳ ಮೇಲೆ ಆಡಳಿತಾತ್ಮಕ ನಿಯಂತ್ರಣ ಹೊಂದಿರುವ ಕೇಂದ್ರ ಸರ್ಕಾರ ನಮ್ಮ ಬೇಡಿಕೆ ವಿಚಾರದಲ್ಲಿ ಮೂಕ ಪ್ರೇಕ್ಷಕನಂತೆ ವರ್ತಿಸುತ್ತಿದೆ. ನಿವೃತ್ತರಿಗೆ ಕಮ್ಯುಟೇಶನ್‌ ಪಿಂಚಣಿ, ಗ್ರಾಚ್ಯುಯಿಟಿ, ಪಿಂಚಣಿ ಆಯ್ಕೆ ಮತ್ತು ದಿನ ಭತ್ಯೆಯಲ್ಲಿನ ಅಸಮಾನತೆಯನ್ನು ಹೋಗಲಾಡಿಸಬೇಕು’ ಎಂದು ಆಗ್ರಹಿಸಿದರು.

ಕೆ.ವಿ. ಆಚಾರ್ಯ, ಜಿ.ಡಿ. ನದಾಫ್, ಎಂ.ಆರ್. ಗೋಪಿನಾಥ್ ರಾವ್, ಎ.ಎನ್. ಕೃಷ್ಣಮೂರ್ತಿ ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT