ಬೆಂಗಳೂರು: ‘ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೆ ಕಾರ್ಮಿಕರೆಂದು ಗುರುತಿಸಿ, ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಆಶಾ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ನಗರದಲ್ಲಿ ಬುಧವಾರ ಹಮ್ಮಿಕೊಂಡ ಬಿಬಿಎಂಪಿ ಆಶಾ ಕಾರ್ಯಕರ್ತೆಯರ ಪ್ರಥಮ ಜಿಲ್ಲಾ ಸಮ್ಮೇಳನದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ವೇತನ ನಿಗದಿಪಡಿಸಬೇಕು. ಆಶಾ ಕಾರ್ಯಕರ್ತೆಯರಿಗೆ ನಗರ ಜೀವನಕ್ಕೆ ತಕ್ಕಂತೆ ಹೆಚ್ಚುವರಿಯಾಗಿ ₹2 ಸಾವಿರ ವೇತನವನ್ನು ಬಿಬಿಎಂಪಿ ಒದಗಿಸಬೇಕು. ಸಾಮಾಜಿಕ ಭದ್ರತೆಯನ್ನು ಖಾತ್ರಿಪಡಿಸಬೇಕು’ ಎಂದು ಒತ್ತಾಯಿಸಿದರು.

ಸಂಘದ ರಾಜ್ಯ ಘಟಕದ ಉಪಾಧ್ಯಕ್ಷೆ ಎಂ. ಉಮಾದೇವಿ, ‘ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಆಶಾ ಕಾರ್ಯಕರ್ತೆಯರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ತಾಯಿ–ಮಗುವಿನ ಮರಣ ಪ್ರಮಾಣ ದರ ಇಳಿಕೆಗೆ ಶ್ರಮಿಸುತ್ತಿದ್ದಾರೆ. 10-15 ವರ್ಷಗಳಿಂದ ದುಡಿಯುತ್ತಿದ್ದರೂ, ಸರ್ಕಾರ ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಸಿದ್ಧವಿಲ್ಲ. ಕಾರ್ಮಿಕರೆಂದು ಪರಿಗಣಿಸಲೂ ಮೀನಮೇಷ ಎಣಿಸುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಬಿಬಿಎಂಪಿ ಆಶಾ ಕಾರ್ಯಕರ್ತೆಯರ ಸಂಘದ ಉಪಾಧ್ಯಕ್ಷೆ ರಮಾ ಟಿ.ಸಿ., ಬಿಬಿಎಂಪಿ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ನಾಗಲಕ್ಷ್ಮಿ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.