ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹವನ್ನು ನಿಭಾಯಿಸಲು ಮತ್ತು ಪ್ರತಿಕ್ರಿಯಿಸಲು ರಾಜಕಾಲುವೆಗಳಲ್ಲಿ 124 ಕಡೆ ನೀರಿನ ಮಟ್ಟ ಅಳೆಯುವ ಸಂವೇದಕಗಳನ್ನು(Water Level Sensor) ಕೆಎಸ್‌ಎನ್‌ಡಿಎಂಸಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದಲ್ಲಿ ಅಳವಡಿಸಲಾಗಿದೆ. ಇದನ್ನು ಪಾಲಿಕೆಯ ಇಂಟಿಗ್ರೇಟೆಡ್ ಕಮಾಂಡಿಂಗ್ ಕಂಟ್ರೋಲ್ ಸೆಂಟರ್‌ನಲ್ಲಿ(ಐಸಿಸಿಸಿ) ಮೇಲ್ವಿಚಾರಣೆ ಮಾಡಲಾಗುತ್ತಿದ್ದು ಈ ಬಗ್ಗೆ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರಹ್ಲಾದ್ ವಿವರಣೆ ನೀಡಿದರು.
‘ಮೇಘ ಸಂದೇಶ’ ‘ವರುಣಮಿತ್ರ’
ಮಳೆಯ ಬಗ್ಗೆ ನಾಗರಿಕರಿಗೆ ಅಗತ್ಯ ಮಾಹಿತಿಯನ್ನು ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮತ್ತು ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ) ವತಿಯಿಂದ ‘ಬೆಂಗಳೂರು ಮೇಘ ಸಂದೇಶ" ಮೊಬೈಲ್ ಆಪ್ (https://play.google.com/store/apps/details?id=com.moserptech.meghasandesha&hl=en) ಬಿಡುಗಡೆಗೊಳಿಸಲಾಗಿದೆ. ಅಲ್ಲದೆ ‘ವರುಣಮಿತ್ರ’ ಅಂತರ್ಜಾಲ ತಾಣದಲ್ಲಿ (http://varunamitra.karnataka.gov.in) ಪಾಲಿಕೆ ವ್ಯಾಪ್ತಿಯಲ್ಲಿ ಉಂಟಾಗುವ ಪ್ರವಾಹವನ್ನು ತಡೆಯಲು ವಲಯವಾರು ನಕ್ಷೆ ಮಳೆ ಮುನ್ಸೂಚನೆ ಪ್ರವಾಹ ಮುನ್ಸೂಚನೆ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆಯಬಹುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.