ಬೆಂಗಳೂರು: ಬಿಬಿಎಂಪಿಯ ಶಂಕರ ಮಠ ವಾರ್ಡ್ನ ಸದಸ್ಯ ಎಂ.ಶಿವರಾಜು ಅವರಿಗೆ ಕೋವಿಡ್ ದೃಢಪಟ್ಟಿದೆ.

ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಅವರು ನೆರವಾಗಿದ್ದರು. ವೈಯಕ್ತಿಕ ಸುರಕ್ಷತಾ ಸಾಧನಾ (ಪಿಪಿಇ) ಧರಿಸಿ ಸೋಂಕಿತರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ಅವರು ಸಾರ್ವಜನಿಕರಲ್ಲಿ ಸ್ಥೈರ್ಯ ತುಂಬುವ ಪ್ರಯತ್ನ ಮಾಡಿದ್ದರು.

ಶಿವರಾಜು ಅವರ ತಂದೆಯವರಿಗೆ ಇತ್ತೀಚೆಗೆ ಹೃದಯದ ಸಮಸ್ಯೆ ಕಾಣಿಸಿಕೊಂಡಿತ್ತು. ಅವರನ್ನು ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದಾಗ ಸೋಂಕು ತಗುಲಿದ್ದು, ದೃಢಪಟ್ಟಿತ್ತು. ಹಾಗಾಗಿ ಕುಟುಂಬದ ಸದಸ್ಯರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಈ ವೇಳೆ ಶಿವರಾಜು ಅವರಿಗೆ ಸೋಂಕು ದೃಢಪಟ್ಟಿದೆ. ಕುಟುಂಬದ ಉಳಿದ ಸದಸ್ಯರು ಯಾರೂ ಸೋಂಕು ಹೊಂದಿಲ್ಲ.

‘ಜಗತ್ತನ್ನೇ ಕಾಡುತ್ತಿರುವ ಸೋಂಕು ನನಗೂ ತಗುಲಿದೆ. ಇದಕ್ಕಾಗಿ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ. ನಾನು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ 14 ದಿನ ಮನೆಯಲ್ಲೇ ಆರೈಕೆಗೆ ಒಳಗಾಗುತ್ತೇನೆ’ ಎಂದು ಶಿವರಾಜು ತಿಳಿಸಿದ್ದಾರೆ.

‘ಕೋವಿಡ್ ಕುರಿತು ಜನಜಾಗೃತಿ ಕೆಲಸದಲ್ಲಿ ಎಲ್ಲರೂ ತೊಡಗಿಸಿಕೊಳ್ಳಿ. ಹಿರಿಯ ನಾಗರಿಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಮನೆಯಿಂದ ಹೊರಗೆ ಹೋಗುವಾಗ ಕಡ್ಡಾಯವಾಗಿ ಮುಖಗವಸು ಧರಿಸಿ. ಜನಸಂದಣಿಗಳಿಂದ ಆದಷ್ಟು ದೂರವಿರಿ’ ಎಂದು ಅವರು ಕಿವಿಮಾತು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.