ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದ್ದು, ಕಳೆದ ವರ್ಷಕ್ಕಿಂತ ಆರು ಲಕ್ಷ ಮತದಾರರ ನಗರದಲ್ಲಿ ಹೆಚ್ಚಾಗಿದ್ದಾರೆ.

2023ರ ಜನವರಿ 1ರಂದು ಪ್ರಕಟವಾಗಿದ್ದ ಅಂತಿಮ ಮತದಾರರ ಪಟ್ಟಿಯಲ್ಲಿ 92,09,917 ಮತದಾರರಿದ್ದರು. ಇದಕ್ಕೆ ಹೋಲಿಸಿದರೆ 6,33,660 ಮತದಾರರು 2024ರ ಅಂತಿಮ ಮತದಾರರ ಪಟ್ಟಿಯಲ್ಲಿ ಅಧಿಕವಾಗಿದ್ದಾರೆ.

ವಿಧಾನಸಭೆ ಚುನಾವಣೆ ನಂತರ ಪ್ರಕಟಿಸಿದ್ದ ಪಟ್ಟಿಯಲ್ಲಿ 97,13,349 ಮತದಾರರಿದ್ದರು. 2023ರ ಅಕ್ಟೋಬರ್ನಲ್ಲಿ ಪ್ರಕಟಿಸಿದ್ದ ಕರಡು ಪಟ್ಟಿಯಲ್ಲಿ 97,90,499 ಮತದಾರರಿದ್ದರು.

ಕರಡು ಪಟ್ಟಿಯಲ್ಲಿದ್ದ ಗಾಂಧಿನಗರ, ರಾಜಾಜಿನಗರ, ಸಿ.ವಿ. ರಾಮನ್ನಗರ, ವಿಜಯನಗರ, ಬಸವನಗುಡಿ, ಬಿ.ಟಿ.ಎಂ. ಲೇಔಟ್, ಜಯನಗರ ವಿಧಾನಸಭೆ ಕ್ಷೇತ್ರಗಳ ಮತದಾರರ ಸಂಖ್ಯೆ, ಅಂತಿಮ ಪಟ್ಟಿಯಲ್ಲಿ ಕಡಿಮೆಯಾಗಿದೆ.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024 ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದರು.

1,86,487 ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದು, 47,960 ಮಂದಿ ತಿದ್ದುಪಡಿ ಮಾಡಿಸಿಕೊಂಡಿದ್ದಾರೆ. 1,33,409 ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ 18 ವರ್ಷದಿಂದ 19 ವರ್ಷದ 1,12,242 ಯುವ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.

ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರದ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಎಲ್ಲಾ ಮತದಾರರ ನೊಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ ಹಾಗೂ ವಾರ್ಡ್ ಕಚೇರಿಗಳಲ್ಲಿ ಪ್ರಕಟಿಸಲಾಗಿರುತ್ತದೆ. ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. www.ceokarnataka.kar.nic.in ಮತ್ತು www.bbmp.gov.in ವೆಬ್ಸೈಟ್ನಲ್ಲಿಯೂ ಅಂತಿಮ ಮತದಾರರ ಪಟ್ಟಿ ಲಭ್ಯವಿದೆ ಎಂದು ಮಾಹಿತಿ ನೀಡಿದರು.

ವೆಬ್ ಪೋರ್ಟಲ್ voters.eci.gov.in, ಮೊಬೈಲ್ ಆ್ಯಪ್ Voter Helpline ಹಾಗೂ ಮತದಾರರ ಸಹಾಯವಾಣಿ 1950 ಮೂಲಕ ಮತದಾರರ ಪಟ್ಟಿಯನ್ನು ಪರಿಶೀಲಿಸಿ, ತಪ್ಪುಗಳಿದ್ದರೆ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್, ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್, ದಯಾನಂದ, ಸ್ನೇಹಲ್, ವಿನೋತ್ ಪ್ರಿಯಾ ಹಾಜರಿದ್ದರು.

98,43,577: ನಗರದಲ್ಲಿರುವ ಒಟ್ಟು ಮತದಾರರು

50,78,525 ಪುರುಷರು

47,63,268 ಮಹಿಳೆಯರು

1,784 ಇತರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.