ಬೆಂಗಳೂರು: ‘ಬಿಬಿಎಂಪಿ ವಾರ್ಡ್ಗಳ ಮರು ವಿಂಗಡಣೆ ಕರಡು ವರದಿ ಸಿದ್ಧವಾಗಿದ್ದು, ಗುರುವಾರ ಸರ್ಕಾರಕ್ಕೆ ಸಲ್ಲಿಸುತ್ತೇವೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟಪಡಿಸಿದರು.

‘ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ಕೆಲವು ದಾಖಲೆಗಳನ್ನು ಒದಗಿಸುವ ಕಾರ್ಯವೂ ಬಾಕಿ ಇತ್ತು. ಈಗ ಎಲ್ಲವೂ ಪೂರ್ಣಗೊಂಡಿದ್ದು, ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ವರದಿ ಸಿದ್ಧಪಡಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರ ಸಮಯ ಪಡೆದು ಸಮಿತಿಯ ಸದಸ್ಯರೊಂದಿಗೆ ಹೋಗಿ ವರದಿ ಸಲ್ಲಿಸುತ್ತೇವೆ’ ಎಂದು ತಿಳಿಸಿದರು.

‘ಪಾಲಿಕೆ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ 8 ವಾರಗಳ ಗಡುವು ನೀಡಿದೆ. ನಿಗದಿತ ಸಮಯದೊಳಗೆ ಚುನಾವಣೆ ನಡೆಸಲು ಯಾವುದೇ ತೊಂದರೆ ಆಗುವುದಿಲ್ಲ. ಗಡುವಿಗೆ ಮೊದಲೇ ಸಿದ್ಧತೆ ಪೂರ್ಣಗೊಳಿಸಲಾಗುವುದು’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.