ನವದೆಹಲಿ: ‘ಪೂರ್ಣಾವಧಿ ಹುದ್ದೆ’ ಯಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಸ್ಥಾನಕ್ಕೆ ಶಾಸಕರನ್ನು ನೇಮಿಸಬಹುದೇ ಎಂಬುದನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.

ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಬಿಜೆಪಿ ಸರ್ಕಾರ ಬಿಡಿಎ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಇದನ್ನು ಪ್ರಶ್ನಿಸಿ ವಕೀಲರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ವಿಚಾರವು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಹಾಗೂ ಎ.ಎಸ್.ಓಕಾ ಪೀಠದ ಮುಂದೆ ಸೋಮವಾರ ಬಂತು.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿ, ‘ಬಿಡಿಎ ಅಧ್ಯಕ್ಷ ಸ್ಥಾನ ಪೂರ್ಣಾವಧಿಯ ಹುದ್ದೆ. ಅದಕ್ಕೆ ಶಾಸಕರನ್ನು ನೇಮಿಸುವಂತಿಲ್ಲ’ ಎಂದರು. ಬಳಿಕ ಪೀಠವು ಕರ್ನಾಟಕ ಸರ್ಕಾರ ಹಾಗೂ ಬಿಡಿಎಗೆ ನೋಟಿಸ್ ನೀಡಿ ಆರು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿತು. ಬಳಿಕ ವಿಚಾರಣೆಯನ್ನು ಮುಂದೂಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.