ಬೆಂಗಳೂರು: ನಗರದ ಹಲವು ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿ ನವಾಜ್ ಷರೀಫ್ (56) ಎಂಬುವರನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ನಿವಾಸಿ ನವಾಜ್, ಹಲವು ವರ್ಷಗಳ ಹಿಂದೆ ಸಿನಿಮಾ ಮೇಕಪ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಅದನ್ನು ಬಿಟ್ಟು ಕಳ್ಳತನಕ್ಕೆ ಇಳಿದಿದ್ದ. 27 ಕಡೆ ಕಳ್ಳತನ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ. ಈತನಿಂದ 350 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ರಂಗೋಲಿ ಹಾಕಿರದ ಹಾಗೂ ಅಂಗಳದಲ್ಲಿ ಕಸ ಬಿದ್ದಿರುತ್ತಿದ್ದ ಮನೆಗಳನ್ನು ಗುರುತಿಸಿ ಆರೋಪಿ ಕೃತ್ಯ ಎಸಗುತ್ತಿದ್ದ. ಕಾಮಾಕ್ಷಿಪಾಳ್ಯ ಪೊಲೀಸರು ಪ್ರಕರಣವೊಂದರಲ್ಲಿ ಆರೋಪಿಯನ್ನು ಕೆಲ ತಿಂಗಳ ಹಿಂದೆಯಷ್ಟೇ ಬಂಧಿಸಿದ್ದರು. ಜೈಲಿಗೆ ಹೋಗಿದ್ದ ಆರೋಪಿ, ಜಾಮೀನು ಮೇಲೆ ಹೊರಬಂದು ಪುನಃ ಕೃತ್ಯ ಎಸಗಲಾರಂಭಿಸಿದ್ದ. ಬೇಗೂರು ಠಾಣೆ ವ್ಯಾಪ್ತಿಯಲ್ಲಿ 7 ಕಡೆ ಕಳ್ಳತನ ಮಾಡಿದ್ದ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.