ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಪತ್ರ ಹಾಗೂ ಚಿನ್ನದ ಪ್ರಮಾಣ ಪತ್ರ ಸ್ವೀಕರಿಸುವುದಕ್ಕೂ ಮೊದಲು ವಿದ್ಯಾರ್ಥಿಗಳು ಪರಸ್ಪರ ಸಂಭ್ರಮಿಸಿದರು. –ಪ್ರಜಾವಾಣಿ ಚಿತ್ರ
ಅತಿ ಹೆಚ್ಚು ಚಿನ್ನದ ಪದಕಗಳನ್ನು ಪಡೆದ ಎಸ್.ಸ್ನೇಹಶ್ರೀ ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪದವಿ ಹಾಗೂ ಚಿನ್ನದ ಪದಕ ಪ್ರದಾನ ಮಾಡಿದರು. ಸಚಿವ ಎನ್.ಚಲುವರಾಯಸ್ವಾಮಿ ಕುಲಪತಿ ಎಸ್.ವಿ. ಸುರೇಶ ಪಾಲ್ಗೊಂಡಿದ್ದರು.
– ಪ್ರಜಾವಾಣಿ ಚಿತ್ರ
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಸೋಮವಾರ ಆಯೋಜಿಸಿದ್ದ 58ನೇ ಘಟಿಕೋತ್ಸವದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದ ಪ್ರಗತಿಪರ ರೈತ ಎಂ.ಸಿ. ರಂಗಸ್ವಾಮಿ ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಸಚಿವ ಎನ್.ಚಲುವರಾಯಸ್ವಾಮಿ ಕುಲಪತಿ ಎಸ್.ವಿ. ಸುರೇಶ ಉಪಸ್ಥಿತರಿದ್ದರು.
– ಪ್ರಜಾವಾಣಿ ಚಿತ್ರ
ಸಾವಯವ ಗೊಬ್ಬರಗಳ ಬಳಕೆಯಿಂದ ಭೂಮಿ ಗುಣಮಟ್ಟ ಸುಧಾರಿಸುತ್ತದೆ. ಜೊತೆಗೆ ಉತ್ಪಾದನಾ ವೆಚ್ಚ ಕಡಿಮೆ ಮಾಡಿ ಆದಾಯ ಹೆಚ್ಚಿಸುತ್ತದೆ.
-ಥಾವರಚಂದ್ ಗೆಹಲೋತ್, ರಾಜ್ಯಪಾಲ
ರೈತರಿಗೆ ಅಗತ್ಯವಿರುವ ಗುಣಮಟ್ಟದ ಬಿತ್ತನೆ ಬೀಜವನ್ನು ಪೂರೈಸಲು ರಾಜ್ಯದಲ್ಲಿ ಬಿತ್ತನೆ ಬೀಜ ಕಾಯ್ದೆ ಅನುಷ್ಠಾನಕ್ಕೆ ತರಲಾಗುತ್ತಿದೆ.