‘ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬಾರದು’ ಎಂದು ಆಗ್ರಹಿಸಿ ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ.

ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಜತೆ, 50ಕ್ಕೂ ಹೆಚ್ಚು ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ.

ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ. ನಾರಾಯಣಗೌಡ ಬಣದಿಂದ ಇಂದು ಬೆಳಿಗ್ಗೆ ಪ್ರತ್ಯೇಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಗಾಂಧಿನಗರದಲ್ಲಿ ಇರುವ ಸಂಘಟನೆಯ ಕಚೇರಿಯಿಂದ ವಿಧಾನ ಸೌಧದವರೆಗೆ ಮೆರವಣಿಗೆ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕರವೇ ತಿಳಿಸಿದೆ.

‘ಕಾವೇರಿ ನದಿ ವಿಚಾರವಾಗಿ ನಮ್ಮ ಹೋರಾಟ ನಿರಂತರ. ಜನರಲ್ಲಿ ಜಾಗೃತಿ ಮೂಡಿಸುವುದು ಮೊದಲ ಆದ್ಯತೆ. ಬಂದ್ ಮಾಡಿ ಜನಸಾಮಾನ್ಯರಿಗೆ ತೊಂದರೆ ನೀಡುವ ಉದ್ದೇಶ ನಮಗಿಲ್ಲ. ಬಂದ್ ಎಂಬುದು ಹೋರಾಟದ ಕೊನೆಯ ಅಸ್ತ್ರ. ಹೀಗಾಗಿ, ಯಾವುದೇ ಬಂದ್ಗೆ ನಮ್ಮ ಬೆಂಬಲವಿಲ್ಲ’ ಎಂದು ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಮತ್ತು ಮೆಟ್ರೊ ರೈಲು ಸಂಚಾರ ಎಂದಿನಂತೆ ಇದೆ.

ಬೆಂಗಳೂರು ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬಳಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಬೆಂಗಳೂರು ನಗರದಲ್ಲಿ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಸಂಚಾರ ಮತ್ತು ಮೆಟ್ರೊ ರೈಲು ಸಂಚಾರ ಎಂದಿನಂತೆ ಇದೆ.
.Cauvery: ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಸಮಿತಿ ಶಿಫಾರಸು.
ಪ್ರತಿಭಟನೆಗೆ ಸೀಮಿತವಾದ ರಾಮನಗರ ಬಂದ್: ರಸ್ತೆಗೆ ರಕ್ತ ಚೆಲ್ಲಿ ಆಕ್ರೋಶ

ರಾಮನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ರಾಮನಗರದಲ್ಲಿ ಮಂಗಳವಾರ ರೈತ, ಕನ್ನಡಪರ ಹಾಗೂ ಇತರ ಸಂಘಟನೆಗಳ ಬಂದ್ ನಡೆಸಿದ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು, ರಸ್ತೆಗೆ ತಮ್ಮ ರಕ್ತ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ 28ರಿಂದ ಅಕ್ಟೋಬರ್ 15ರವರೆಗೆ ಕರ್ನಾಟಕ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಬೇಕಿದೆ. ಮಂಗಳವಾರ ನಡೆದ ಸಮಿತಿಯ ಸಭೆಯಲ್ಲಿ ಈ ಶಿಫಾರಸು ಮಾಡಲಾಗಿದೆ. ಪ್ರತಿದಿನ 12,500 ಕ್ಯೂಸೆಕ್ ನೀರು ಹರಿಸುವಂತೆ ತಮಿಳುನಾಡು ಒತ್ತಾಯಿಸಿತ್ತು.

Cauvery Issue| ಬೆಂಗಳೂರು ಬಂದ್: ಪೊಲೀಸರಿಗೆ ಸತ್ತ ಇಲಿ ಬಿದ್ದಿದ್ದ ಆಹಾರ ಪೂರೈಕೆ

ಜಯನಗರ ಬಳಿಯ ‘ಉಡುಪಿ ಹಬ್’ ಹೋಟೆಲ್ಗೆ ನುಗ್ಗಿದ್ದ ಇಬ್ಬರು ಗಲಾಟೆ ಮಾಡಿದ್ದಾರೆ. ಹೋಟೆಲ್ನಲ್ಲಿದ್ದ ಗಾಜಿನ ಟೇಬಲ್ಗೆ ಕಲ್ಲಿನಿಂದ ಹೊಡೆದು ಪುಡಿ ಪುಡಿ ಮಾಡಿದ್ದಾರೆ. ಆರೋಪಿಗಳ ಕೃತ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.