ಬೆಂಗಳೂರು: ಭಾರಿ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ನಾಳೆ(ಬುಧವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಜಗದೀಶ್ ಅವರು ಆದೇಶಿಸಿದ್ದಾರೆ.

ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆದರೆ, ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್, ಐಟಿಐ ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಈಗ ನೀಡಿರುವ ರಜೆಯಿಂದ ಉಂಟಾಗಿರುವ ಕಲಿಕಾ ಸಮಯದ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿ ನಡೆಸುವ ಮೂಲಕ ಸರಿದೂಗಿಸುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.