ಬೆಂಗಳೂರು: ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಯ ಸಾಮಾಜಿಕ ಮಾಧ್ಯಮಗಳ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾನ್‌ಸ್ಟೆಬಲ್ ಎಚ್.ಎಂ.ಲೋಕೇಶ್ ಅವರನ್ನು ಮೆಕ್ಸಿಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿ
ಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಲೋಕೇಶ್ ಅವರು ರಾಯಭಾರ ಕಚೇರಿಯ ಭದ್ರತಾ ಸಹಾಯಕ ಹುದ್ದೆಯ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ
ದಲ್ಲಿ ಉತ್ತೀರ್ಣರಾಗಿ ಹುದ್ದೆಗೆ ಆಯ್ಕೆಯಾಗಿದ್ದಾರೆ. ಈ ಕುರಿತು ಮೆಕ್ಸಿಕೊ ರಾಯಭಾರ ಕಚೇರಿ ಅಧಿಕಾರಿಗಳು ಮಾರ್ಚ್ 14ರಂದು ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ‘ಕನ್ನಡಿಗ ಲೋಕೇಶ್ ಅವರು ಸಂವಹನ, ಕಂಪ್ಯೂಟರ್ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಪರಿಣತಿ ಪಡೆದು ಹುದ್ದೆಗೆ ನಿಯೋಜನೆ ಆಗಿದ್ದಾರೆ. ಅವರಿಗೆ ಅಭಿನಂದನೆಗಳು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.