ಬೆಂಗಳೂರು: ಸಂಜಯ್‌ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 12 ಗ್ರಾಂ ಎಂಡಿಎಂಎ ಕ್ರಿಸ್ಟಲ್, 27 ಗ್ರಾಂ ಬ್ರೌನ್ ಷುಗರ್ ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಇವುಗಳ ಒಟ್ಟು ಮೌಲ್ಯ ₹ 3 ಲಕ್ಷ.

ಆರೋಪಿಗಳಾದ ಸೈಯದ್ ಸಲೀಂ ಹಾಗೂ ಶೇಖ್ ಮುದಾಸಿರ್ ಅಹಮ್ಮದ್ ಬೆಂಗಳೂರಿನವರೇ ಆಗಿದ್ದು, ಕಡಿಮೆ ಸಮಯದಲ್ಲಿ ಹಣ ಗಳಿಸುವ ದುರುದ್ದೇಶದಿಂದ ನಗರದಲ್ಲಿ ನೆಲೆಸಿದ್ದ ನೈಜೀರಿಯಾದ ಪ್ರಜೆಗಳಿಗೆ ಹಾಗೂ ಮುಂಬೈನ ಗ್ರಾಹಕರಿಗೆ ಮಾದಕ ಪದಾರ್ಥ ಪೂರೈಕೆ ಮಾಡುತ್ತಿದ್ದರು. ಪ್ರತಿ ಗ್ರಾಂಗೆ ₹ 3 ಸಾವಿರಕ್ಕೆ ಖರೀದಿಸಿ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಐಟಿ, ಬಿಟಿ ಉದ್ಯೋಗಿಗಳಿಗೆ ₹ 8 ಸಾವಿರದಿಂದ 10 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಒಬ್ಬ ರೌಡಿಪಟ್ಟಿಯಲ್ಲಿದ್ದು, ನಗರದ ವಿವಿಧ ಠಾಣೆಗಳಲ್ಲಿ 8 ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮತ್ತೊಂದು ಪ್ರಕರಣದಲ್ಲಿ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ₹ 80 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತು ವಶಕ್ಕೆ ಪಡೆದು, ಆರೋಪಿ ಮೃತ್ಯುಂಜಯ ಎಂಬಾತನನ್ನು ಬಂಧಿಸಿದ್ದಾರೆ.

1 ಕೆ.ಜಿ 5 ಗ್ರಾಂ ಹಶೀಶ್ ಆಯಿಲ್, 1 ಕೆ.ಜಿ 200 ಗ್ರಾಂ ಗಾಂಜಾ
ಹಾಗೂ ಕೃತ್ಯಕ್ಕೆ ಬಳಸಿದ ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಆರೋಪಿಯು ಆಂಧ್ರಪ್ರದೇಶದ
ಪರಿಚಯಸ್ಥರಿಂದ ಮಾದಕ ವಸ್ತುಗಳನ್ನು ಖರೀದಿಸಿ ಕಳ್ಳಸಾಗಣೆ ಮಾಡುತ್ತಿದ್ದ. ಈತನ ವಿರುದ್ಧ ಈ ಹಿಂದೆ ಮಾಲೂರು, ಬಾಣಸವಾಡಿ, ಎಚ್‌ಎಎಲ್ ಹಾಗೂ ವೈಯಾಲಿಕಾವಲ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.