ಬೆಂಗಳೂರು: ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಹಾಗೂ ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ಗಲಭೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಶನಿವಾರ ದಾಳಿ ಮಾಡಿದರು.

‘ಗೋವಿಂದಪುರ, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ, ಪುಲಕೇಶಿನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿರುವ ಏಳು ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಹಲವು ದಾಖಲೆ ಹಾಗೂ ವಸ್ತುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಎನ್ಐಎ ಮೂಲಗಳು ಹೇಳಿವೆ.

‘2020ರ ಆಗಸ್ಟ್ 11ರಂದು ರಾತ್ರಿ ನಡೆದಿದ್ದ ಗಲಭೆ ಪ್ರಕರಣದಲ್ಲಿ 250ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಲಾಗಿತ್ತು. ಆರೋಪಿಗಳು ಎನ್ನಲಾದ ಹಬೀಬ್, ಪೀರ್ಪಾಷಾ, ರೆಹಮಾನ್, ಶಬ್ಬೀರ್ ಸೇರಿ 7 ಮಂದಿ ತಲೆಮರೆಸಿಕೊಂಡಿದ್ದಾರೆ. ಅವರದ್ದೇ ಮನೆಗಳ ಮೇಲೆ ದಾಳಿ ನಡೆಸಲಾಯಿತು’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.