ಬೆಂಗಳೂರು: ನಗರದ ಶಾಲಾ, ಕಾಲೇಜುಗಳು ಹಾಗೂ ಪ್ರತಿಷ್ಠಿತ ಹೋಟೆಲ್ಗಳಿಗೆ ಹುಸಿ ಬಾಂಬ್ ಬೆದರಿಕೆ ಹೊತ್ತು ಇ–ಮೇಲ್ಗಳು ಬರುತ್ತಿರುವುದು ಮುಂದುವರೆದಿದ್ದು, ಗುರುವಾರ ಸಹ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಷಪ್ ಕಾಟನ್ ಬಾಲಕ ಹಾಗೂ ಬಾಲಕಿಯರ ಶಾಲೆಗೆ ಇಂತಹದ್ದೇ ಸಂದೇಶ ಬಂದು ಆತಂಕ ಸೃಷ್ಟಿಯಾಗಿತ್ತು.

ಶಾಲೆಯ ವೆಬ್ಸೈಟ್ಗೆ ಕಿಡಿಗೇಡಿಗಳು ಗುರುವಾರ ಮುಂಜಾನೆ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದರು. ಸಂಜೆ ವೇಳೆ ಇ–ಮೇಲ್ ಪರಿಶೀಲನೆ ನಡೆಸುತ್ತಿದ್ದಾಗ ಆಡಳಿತ ಮಂಡಳಿಯ ಗಮನಕ್ಕೆ ಸಂದೇಶ ಬಂದಿದ್ದು ಗೊತ್ತಾಗಿತ್ತು. ತಕ್ಷಣವೇ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೊರಕ್ಕೆ ಬಂದಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.

ಬಾಂಬ್ ನಿಷ್ಕ್ರಿಯ ದಳ, ಬಾಂಬ್ ತಪಾಸಣೆ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶಾಲಾ ಆವರಣದಲ್ಲಿ ಪರಿಶೀಲನೆ ನಡೆಸಿದರು. ಯಾವುದೇ ಸ್ಫೋಟಕ ವಸ್ತುಗಳಾಗಲೀ, ರಾಸಾಯನಿಕ ಪದಾರ್ಥಗಳಾಗಲೀ ಪತ್ತೆ ಆಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆಯೂ ಹನುಮಂತ ನಗರ, ಸದಾಶಿವನಗರ, ವಿ.ವಿ. ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಎಂಜಿನಿಯರಿಂಗ್ ಕಾಲೇಜುಗಳ ಇ–ಮೇಲ್ಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.