ಬೆಂಗಳೂರು: ಜಯನಗರ ಠಾಣೆ ವ್ಯಾಪ್ತಿಯಲ್ಲಿರುವ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಸಂಬಂಧ ಬಾಲಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ₹ 9 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

‘5ನೇ ಬ್ಲಾಕ್‌ನಲ್ಲಿರುವ ಮನೆಯಲ್ಲಿ ಏಪ್ರಿಲ್ 29ರಂದು ಕಳ್ಳತನ ನಡೆದಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡು, ಬಾಲಕನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಒಂದು ಅಂತಸ್ತಿನ ಮನೆಯಲ್ಲಿ ದಂಪತಿ ಮಾತ್ರ ವಾಸವಿದ್ದಾರೆ. ಸೆಕೆ ಹೆಚ್ಚಿದ್ದರಿಂದ ಅವರಿಬ್ಬರು ನೆಲಮಹಡಿಗೆ ಹೋಗಿದ್ದರು. ಮೊದಲ ಮಹಡಿಯ ಬಾಗಿಲು ತೆರೆದಿಟ್ಟಿದ್ದರು. ಇದೇ ಬಾಗಿಲು ಮೂಲಕ ಒಳಗೆ ನುಗ್ಗಿದ್ದ ಆರೋಪಿ, ಚಿನ್ನಾಭರಣ ಹಾಗೂ ವಜ್ರದ ಆಭರಣ ಕದ್ದುಕೊಂಡು ಪರಾರಿಯಾಗಿದ್ದ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.