ಬೆಂಗಳೂರು: ‘ವಿಶ್ವದ ಅತಿ ಹೆಚ್ಚು ಮಾಲಿನ್ಯದ 39 ನಗರಗಳಲ್ಲಿ ಬೆಂಗಳೂರು ಕೂಡ ಒಂದಾಗಿದೆ’ ಎಂದು ಬಿಬಿಎಂಪಿ ಆಡಳಿತಾಧಿಕಾರಿ ಎಸ್.ಆರ್. ಉಮಾಶಂಕರ್ ಹೇಳಿದರು.

‘ಕಡಿಮೆ ಇಂಗಾಲದ ಕಡೆಗೆ, ಒಳಗೊಳ್ಳುವಿಕೆ ಮತ್ತು ವಾಸಯೋಗ್ಯ ಬೆಂಗಳೂರು’ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಸರ್ಕಾರದ ಜೊತೆ ನಾಗರಿಕರು ಕೈಜೋಡಿಸಿದರೆ ಮಾತ್ರ ನಗರದಲ್ಲಿ ವಾಯುಮಾಲಿನ್ಯವನ್ನು ನಿಯಂತ್ರಿಸಬಹುದಾಗಿದೆ. ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಉತ್ತಮ ಯೋಜನೆಗಳನ್ನು ರೂಪಿಸಿಕೊಂಡು ಅನುಷ್ಠಾನಕ್ಕೆ ತರಬೇಕಿದೆ’ ಎಂದರು.

ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಬೇಕಾದರೆ ನಾಗರಿಕರು ಖಾಸಗಿ ವಾಹನಗಳನ್ನು ಬಿಟ್ಟು, ಸಾರ್ವಜನಿಕ ವಾಹನಗಳನ್ನು ಹೆಚ್ಚಾಗಿ ಬಳಸಬೇಕು. ಇದರಿಂದ ವಾಯುಮಾಲಿನ್ಯ ಕ್ರಮೇಣ ಕಡಿಮೆಯಾಗಲಿದೆ ಎಂದು ತಿಳಿಸಿದರು.

ನಾಗರಿಕರು ಜವಾಬ್ದಾರಿಯಿಂದ ವರ್ತಿಸಿದರೆ ಮಾತ್ರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ. ಪ್ರತಿಯೊಬ್ಬರ ಸಹಕಾರದಿಂದ ಉತ್ತಮ ನಗರವನ್ನು ರೂಪಿಸಬಹುದಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಹವಾಮಾನದಲ್ಲಿ ತ್ವರಿತವಾಗಿ ಬದಲಾವಣೆಗಳನ್ನು ಕಾಣಬಹುದೆಂದು ಹೇಳಿದರು.

ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ‘ನಗರದಲ್ಲಿ ಹೆಚ್ಚಾಗಿ ಗಿಡಗಳನ್ನು ನೆಡುವುದು, ರಾಜಕಾಲುವೆ ವ್ಯವಸ್ಥೆ ಸರಿಪಡಿಸುವುದು, ಸಂಚಾರ ದಟ್ಟಣೆ ನಿಯಂತ್ರಿಸುವುದು, ಘನತ್ಯಾಜ್ಯ ವ್ಯವಸ್ಥೆ ಸರಿಪಡಿಸುವುದು ಸೇರಿ ಇನ್ನಿತರೆ ವಿಷಯಗಳಲ್ಲಿ ನಾಗರಿಕರ ಪಾತ್ರ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.