ಬೆಂಗಳೂರು: ಕೊರೊನಾ ವೈರಸ್ (ಕೊರೊನಾ–19) ಭೀತಿ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಬರುವ ನರ್ಸರಿ, ಎಲ್‌ಕೆಜಿ, ಯುಕೆಜಿಗಳಿಗೆ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸೋಮವಾರದಿಂದಪೂರ್ವ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ಈಮೂರು ಜಿಲ್ಲೆಯ ಸರ್ಕಾರಿ, ಅನುದಾನ ಹಾಗೂ ಅನುದಾನ ರಹಿತ ಶಾಲೆಗಳ ನರ್ಸರಿ, ಎಲ್‌ಕೆಜಿ, ಹಾಗೂ ಯುಕೆಜಿಯಪೂರ್ವ ಪ್ರಾಥಮಿಕ ಶಾಲೆಗಳಿಗೆ ಮುಂಜಾಗ್ರತೆ ಕ್ರಮವಾಗಿ ಮುಂದಿನ ಆದೇಶದವರೆಗೂ ರಜೆ ಘೋಷಣೆ ಮಾಡಲಾಗಿದೆ.

ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ LKG, UJG ಶಾಲೆಗಳಿಗೆ ಸೋಮವಾರದಿಂದರಜೆ ಘೋಷಿಸಲಾಗಿದೆ ಎಂದು ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.