ಬೆಂಗಳೂರು: ಜನ್ಮದಿನದ ಸಮಾರಂಭದಲ್ಲಿ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ್ದ ಆರೋಪದಡಿ ರಿಯಲ್ ಎಸ್ಟೇಟ್ ಉದ್ಯಮಿ ಸೈಯ್ಯದ್ ಅಲ್ತಾಫ್ ಅಹಮದ್ (59) ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಸೆಪ್ಟೆಂಬರ್ 22ರಂದು ಬನ್ನೇರುಘಟ್ಟ ರಸ್ತೆಯಲ್ಲಿನ ಗೋದಾಮು ಒಂದರಲ್ಲಿ ಮೊಯೀನ್ ಖಾನ್ ಎಂಬುವವರ ಜನ್ಮದಿನದ ಕಾರ್ಯಕ್ರಮ ನಡೆದಿತ್ತು. ಅಲ್ಲಿ ಆರೋಪಿ ಅಲ್ತಾಫ್ ಅಹಮದ್, ತನ್ನ ಬಳಿಯಿದ್ದ ಪರವಾನಗಿ ಹೊಂದಿರುವ ಪಿಸ್ತೂಲ್ ತೆಗೆದು ಆರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಅದರ ವಿಡಿಯೊ ತುಣುಕನ್ನು ಜುಬೇರ್ ಖಾನ್ ಲಿಮ್ರಾ ಎಂಬುವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೋಸ್ಟ್ ಮಾಡಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಗಮನಿಸಿದ್ದ ಬೆಂಗಳೂರು ಪೊಲೀಸ್ ಸಾಮಾಜಿಕ ಜಾಲತಾಣ ವಿಭಾಗ ತಕ್ಷಣವೇ ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಿತ್ತು.

ಮಾಹಿತಿ ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು, ಎಫ್ಐಆರ್ ದಾಖಲಿಸಿಕೊಂಡು ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.