ಬೆಂಗಳೂರು: ಜನರಿಗೆ ನೀರು ಪೂರೈಸಲು ಹಗಲಿರುಳು ಶ್ರಮಿಸುತ್ತಿರುವ ಜಲಮಂಡಳಿ ಸಿಬ್ಬಂದಿಯ ಹಿತವನ್ನು ಕಾಪಾಡಲಾಗುವುದು. ಅವರ ಕುಟುಂಬಕ್ಕೆ ಸುರಕ್ಷತೆ ಒದಗಿಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸ್ವಚ್ಛತಾ ಕಾರ್ಮಿಕರ ಯೂನಿಯನ್ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 133ನೇ, ಬಾಬು ಜಗಜೀವನ್ ರಾಂ ಅವರ 118ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ನಗರದಲ್ಲಿ ಎದುರಾಗಿದ್ದ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಬೆಂಗಳೂರು ಜಲಮಂಡಳಿಯ ಎಲ್ಲ ಹಂತದ ಸಿಬ್ಬಂದಿ ಕಾರ್ಯನಿರ್ವಹಿಸಿದ್ದಾರೆ. ಅದರಲ್ಲೂ ನಗರದ ಸ್ವಚ್ಚತೆಯನ್ನು ಕಾಪಾಡಿ, ಸೌಂದರ್ಯವನ್ನು ಹೆಚ್ಚಿಸುವಲ್ಲಿ ಒಳಚರಂಡಿ ವಿಭಾಗದ ಸಿಬ್ಬಂದಿಯ ಕಾರ್ಯ ಪ್ರಮುಖವಾಗಿದೆ. ತಮ್ಮ ಆರೋಗ್ಯವನ್ನು ಪಣಕ್ಕಿಟ್ಟು ನಗರದ ಸ್ವಚ್ಛತೆಯನ್ನು ಕಾಪಾಡುತ್ತಿದ್ದಾರೆ’ ಎಂದು ಶ್ಲಾಘಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್. ಸಂಪತ್ ರಾಜ್ ಮಾತನಾಡಿ, ‘ನೀರಿಗಾಗಿ ಕೊಳಗೇರಿ ಜನ ಪರಿತಪಿಸುತ್ತಿದ್ದಾರೆ. ಕಲುಷಿತ ನೀರಿನ ಸಮಸ್ಯೆ ತೀವ್ರಗೊಂಡಿದೆ. ಸಗಾಯಪುರ, ಡಿ.ಜೆ. ಹಳ್ಳಿ ಮತ್ತಿತರೆ ಭಾಗಗಳಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸಬೇಕು. ಪ್ರತ್ಯೇಕ ಘಟಕ ತೆರೆದರೆ ತಕ್ಣಣವೇ ಪರಿಹಾರ ಕಂಡುಕೊಳ್ಳಲು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

ಜಲಮಂಡಳಿಯ ಪ್ರಧಾನ ಮುಖ್ಯ ಎಂಜಿನಿಯರ್ ಬಿ. ಸುರೇಶ್, ಮುಖ್ಯ ಆಡಳಿತಾಧಿಕಾರಿ ಸಿ. ಮದನಮೋಹನ್, ಆರ್ಥಿಕ ಸಲಹೆಗಾರ ಜಿ.ಎಸ್. ಸುಬ್ಬರಾಮಯ್ಯ, ಬೆಂಗಳೂರು ಜಲಮಂಡಳಿ ನೌಕರರ ಸಂಘದ ಅಧ್ಯಕ್ಷ ಬಿ.ಕೆ. ಮರಿಯಪ್ಪ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸದಾಶಿವ ಕಾಂಬಳೆ, ಯೂನಿಯನ್ ಅಧ್ಯಕ್ಷ ಸಿದ್ದಪ್ಪ, ಉಪಾಧ್ಯಕ್ಷ ಓಬಳೇಶ್, ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.