ಬೆಂಗಳೂರು: ಆನೇಕಲ್ ತಾಲ್ಲೂಕಿನ ಜಿ.ಆರ್.ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದಲ್ಲಿ ಮಾದಕ ವಸ್ತು ಸೇವನೆ ಹಾಗೂ ತನಿಖೆಯ ದಿಕ್ಕು ತಪ್ಪಿಸುವ ಉದ್ದೇಶದಿಂದ ವಿಡಿಯೊ ಮಾಡಿ ಹರಿಬಿಟ್ಟ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ತೆಲುಗು ನಟಿ ಹೇಮಾ ಅವರನ್ನು ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
.ಬೆಂಗಳೂರು | ರೇವ್ ಪಾರ್ಟಿ: ತೆಲುಗು ನಟಿ ಹೇಮಾ ಸೇರಿ 86 ಮಂದಿ ಡ್ರಗ್ಸ್ ಸೇವನೆ ದೃಢ.
ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆಗಾಗಿ ಹೇಮಾ ಅವರನ್ನು ಒಂದು ದಿನದ ಮಟ್ಟಿಗೆ ಸಿಸಿಬಿ ಕಸ್ಟಡಿಗೆ ಪಡೆದುಕೊಂಡಿತ್ತು. ಕಸ್ಟಡಿ ಅಂತ್ಯಗೊಂಡ ಕಾರಣ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಆರೋಪಿಯನ್ನು ಆನೇಕಲ್‌ನ ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಆರೋಪಿಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಆ ನಂತರ ಆರೋಪಿಯನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

‘ನಾನು ಮಾದಕ ವಸ್ತು ಸೇವನೆ ಮಾಡಿಲ್ಲ. ದುರುದ್ದೇಶಪೂರ್ವಕವಾಗಿ ನನ್ನ ಮೇಲೆ ಆರೋಪ ಹೊರಿಸಲಾಗಿದೆಯೆಂದು ವಿಚಾರಣೆ ವೇಳೆ ನಟಿ ಹೇಮಾ ಹೇಳಿಕೆ ನೀಡಿದ್ದಾರೆ’ ಎಂದು ಮೂಲಗಳು ಹೇಳಿವೆ.
.ಬೆಂಗಳೂರಲ್ಲಿ ರೇವ್ ಪಾರ್ಟಿ: ಸಿಸಿಬಿಯಿಂದ ತೆಲುಗು ನಟಿ ಹೇಮಾ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.