ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು ನಗರದ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆ

Published 16 ಜುಲೈ 2024, 21:38 IST
Last Updated 16 ಜುಲೈ 2024, 21:38 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಮಳೆ ಹಾಗೂ ಮೋಡ ಕವಿದ ವಾತಾವರಣದಿಂದ ತಾಪಮಾನ ಇಳಿಮುಖ ಕಂಡಿದ್ದು, ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಗರಿಷ್ಠ ತಾಪಮಾನ 24.1 ಡಿಗ್ರಿಸೆಲ್ಸಿಯಸ್ ವರದಿಯಾಗಿದೆ. 

ಇದು ಈ ವರ್ಷದ ಎರಡನೆ ಅತೀ ಕಡಿಮೆ ಗರಿಷ್ಠ ಉಷ್ಣಾಂಶವಾಗಿದೆ. ಸರಾಸರಿ ಗರಿಷ್ಠ ಉಷ್ಣಾಂಶಕ್ಕಿಂತ ಶೇ 4.2 ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ವರದಿಯಾಗಿದೆ. ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದರಿಂದ ನಗರದಲ್ಲಿ ಚಳಿ ಕಾಣಿಸಿಕೊಂಡಿದೆ. 

ಈ ತಿಂಗಳು ಪ್ರಾರಂಭದಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್‌ ಆಸುಪಾಸಿನಲ್ಲಿತ್ತು. ಮಳೆಯಿಂದಾಗಿ ನಗರದಲ್ಲಿ ತಾಪಮಾನ ಕ್ರಮೇಣ ತಗ್ಗಿದೆ. 

ಮುಂದಿನ ಐದು ದಿನಗಳು ನಗರದಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT