ಬೆಂಗಳೂರು: ‘ನಗರದ ಸಂಚಾರ ದಟ್ಟಣೆ, ಕೇವಲ ಸಾರಿಗೆ ಸಮಸ್ಯೆಯಲ್ಲ. ಇದು, ಆರ್ಥಿಕ ವ್ಯವಸ್ಥೆ ಹಾಗೂ ಪರಿಸರಕ್ಕೆ ದೊಡ್ಡ ಸಮಸ್ಯೆಯಾಗಿದೆ’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಎಂ.ಎನ್. ಅನುಚೇತ್ ಹೇಳಿದರು.

ಸಂಚಾರ ದಟ್ಟಣೆಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ ಜೊತೆಗಿನ ಒಪ್ಪಂದಕ್ಕೆ ಸಹಿ ಹಾಕಿ ಅವರು ಮಾತನಾಡಿದರು.

‘ತಂತ್ರಜ್ಞಾನ ಹೊಸ ಹೊಸ ಆಲೋಚನೆಗಳ ಮೂಲಕ ದಟ್ಟಣೆಯನ್ನು ಕಡಿಮೆಗೊಳಿಸಬೇಕಿದೆ. ದಟ್ಟಣೆ ಕಡಿಮೆಯಾದರೆ, ಉತ್ಪಾದಕತೆ ಹೆಚ್ಚುತ್ತದೆ. ವಾಯು ಮಾಲಿನ್ಯ ಸಹ ಕಡಿಮೆ ಆಗಿ, ನಿವಾಸಿಗಳ ಜೀವನ ಸುಧಾರಿಸುತ್ತದೆ’ ಎಂದು ಅನುಚೇತ್ ಹೇಳಿದರು.

ಮಹಾವಿದ್ಯಾಲಯದ ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಡಾ. ವಿ. ಶ್ರೀಧರ್, ಮಾಹಿತಿ ವಿಜ್ಞಾನ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಮೋಹನ್ ಗೌಡರ್, ಕಾರ್ಪೊರೇಟ್ ಸಂಬಂಧಗಳ ನಿರ್ದೇಶಕ ಕೆ.ಬಿ.ರಾವ್ ಹಾಜರಿದ್ದರು.

ವಾಹನಗಳ ಸಂಚಾರದ ಮೇಲ್ವಿಚಾರಣೆ, ದಟ್ಟಣೆ ನಿಯಂತ್ರಣ, ಸಂಚಾರ ನಿಯಮ ಉಲ್ಲಂಘಿಸುವವರ ಪತ್ತೆ ಹಾಗೂ ದಟ್ಟಣೆ ಕಾರಣಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪೊಲೀಸರು ಹಾಗೂ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ ಹೊಸ ಒಪ್ಪಂದ ಮಾಡಿಕೊಂಡಿದೆ. ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಸಂಚಾರ ನಿರ್ವಹಣೆಯಲ್ಲಿ ಇಂಟರ್ನ್‌ಶಿಪ್ ಅವಕಾಶ ಪಡೆಯಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.