ಬೆಂಗಳೂರು: ನೀರು ಪೂರೈಕೆಯಲ್ಲಿನ ವ್ಯತ್ಯಯ ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್ ವಿದ್ಯಾರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದರು.

ನಗರದಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯ ಕಾರಣ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿ ಸಂಪ್ನಿಂದ ‘ಓವರ್ಹೆಡ್’ ಟ್ಯಾಂಕ್ಗೆ ನೀರು ಸರಬರಾಜು ಸಾಧ್ಯವಾಗಿದೇ ವಿದ್ಯಾರ್ಥಿಗಳು ಪರದಾಡಿದರು.

ಹೆಚ್ಚಿನ ಶೇಖರಣಾ ಸಾಮರ್ಥ್ಯದ ‘ಓವರ್ ಹೆಡ್’ ಟ್ಯಾಂಕ್ಗಳನ್ನು ಒದಗಿಸುವಂತೆ ಕೆಲ ಸಮಯದಿಂದಲೂ ಬೇಡಿಕೆ ಇಟ್ಟಿದ್ದೆವು. ಆದರೆ, ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದರ ಪರಿಣಾಮ ಸಮಸ್ಯೆ ಎದುರಿಸುವಂತಾಗಿದೆ. ಶೌಚಾಲಯಕ್ಕೂ ನೀರಿಲ್ಲ. ಇದರಿಂದ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನಂತರ ವಿಶ್ವವಿದ್ಯಾಲಯದ ಅಧಿಕಾರಿಗಳು ಟ್ಯಾಂಕರ್ಗಳಲ್ಲಿ ನೀರು ಪೂರೈಸಿದರು. ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸುವ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.