ಬೆಂಗಳೂರು: ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಆರೋಪದಡಿ ಸೆರೆ ಸಿಕ್ಕಿರುವ ಕಾವಲ್ ಭೈರಸಂದ್ರದ ಪಿ. ನವೀನ್, ಹಲವು ಬಾರಿ ಇಂಥ ಅವಹೇಳನಕಾರಿ ಪೋಸ್ಟ್ಗಳನ್ನು ಪ್ರಕಟಿಸಿದ್ದನೆಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ನವೀನ್ನನ್ನು ಮಂಗಳವಾರ ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ. ಕಾವಲ್ ಭೈರಸಂದ್ರದಲ್ಲಿ ಆತನನ್ನು ವಶಕ್ಕೆ ಪಡೆದ ಪೊಲೀಸರು, ರಾತ್ರಿಯೇ ವೈದ್ಯಕೀಯ ಹಾಗೂ ಕೊರೊನಾ ಪರೀಕ್ಷೆ ಮಾಡಿಸಿದರು.

‘ಮುಸ್ಲಿಂ ಮುಖಂಡರು ನೀಡಿರುವ ದೂರು ಆಧರಿಸಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ನವೀನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಆರೋಪಿ, ‘ನನ್ನ ಖಾತೆಯನ್ನು ಯಾರೋ ಹ್ಯಾಕ್ ಮಾಡಿದ್ದಾರೆ. ಪೋಸ್ಟ್ಗೂ ನನಗೂ ಯಾವುದೇ ಸಂಬಂಧವಿಲ್ಲ. ಬೇಕಾದರೆ, ಹ್ಯಾಕ್ ಬಗ್ಗೆ ನಾನೇ ದೂರು ನೀಡುತ್ತೇನೆ’ ಎಂದು ಹೇಳುತ್ತಿದ್ದಾನೆ.

ಹಲವು ಬಾರಿ ಕೃತ್ಯ: ‘ಆರೋಪಿ ನವೀನ್, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಅಕ್ಕನ ಮಗ. ಆತ, ಹಲವು ಬಾರಿ ಅವಹೇಳನಕಾರಿ ಪೋಸ್ಟ್ಗಳನ್ನು ಫೇಸ್ಬುಕ್ನಲ್ಲಿ ಪ್ರಕಟಿಸಿದ್ದ. ಈ ಬಗ್ಗೆ ಆತನೇ ಬಾಯ್ಬಿಟ್ಟಿದ್ದಾನೆ’ ಎಂದೂ ಅಧಿಕಾರಿ ಹೇಳಿದರು.

ಮೈಸೂರು ಹುಲಿ ಟಿಪ್ಪು ಸುಲ್ತಾನ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಗ್ಗೆಯೂ ಆರೋಪಿ, ಅವಹೇಳನಕಾರಿ
ಯಾಗಿ ಪೋಸ್ಟ್ ಪ್ರಕಟಿಸಿದ್ದ. ಆದರೆ, ಆ ಬಗ್ಗೆ ಎಲ್ಲಿಯೂ ದೂರು ದಾಖಲಾಗಿರಲಿಲ್ಲ.

ಆರೋಪಿ, ತನ್ನ ಫೋಟೊ ಹಾಗೂ ಅಖಂಡ ಶ್ರೀನಿವಾಸಮೂರ್ತಿ ಫೋಟೊ ಸೇರಿಸಿರಮ್ಜಾನ್ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಶುಭ ಕೋರಿದ್ದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ.

ಬಿಜೆಪಿ ಗೆಲ್ಲುವುದಾಗಿ ಹೇಳಿದ್ದ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಫೇಸ್ಬುಕ್ನಲ್ಲಿ ಪೋಸ್ಟ್ ಪ್ರಕಟಿಸಿದ್ದ ನವೀನ್, ‘ಈ ಬಾರಿ ಬಿಜೆಪಿಗೆ ಮತ ಹಾಕಿದ್ದೇನೆ. ಚುನಾವಣೆ ದಿನ ಮಳೆ ಇತ್ತು. ಹೀಗಾಗಿ, ಮೇ 23ರ ಫಲಿತಾಂಶದಂದು ಕಮಲ ಅರಳಲಿದೆ’ ಎಂದು ಹೇಳಿಕೊಂಡಿದ್ದ. ಈ ಪೋಸ್ಟ್ ಈಗ ಎಲ್ಲೆಡೆ ಹರಿದಾಡುತ್ತಿದೆ.

ಮೈಸೂರು ಹುಲಿ ಟಿಪ್ಪು ಸುಲ್ತಾನ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಗ್ಗೆಯೂ ಆರೋಪಿ, ಅವಹೇಳನಕಾರಿಯಾಗಿ ಪೋಸ್ಟ್ ಪ್ರಕಟಿಸಿದ್ದ. ಆದರೆ, ಆ ಬಗ್ಗೆ ಎಲ್ಲಿಯೂ ದೂರು ದಾಖಲಾಗಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.