ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿರುವುದಿಂದ ಅದಕ್ಕೆ ಸಂಬಂಧಿಸಿದ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿ ನಿಗದಿಪಡಿಸಿ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.

2024ರ ಜ.1ಕ್ಕೆ ಉಲ್ಲೇಖಿಸಿದಂತೆ ಜ.5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಬೇಕಿದೆ. ಹೀಗಾಗಿ, ಚುನಾವಣೆ ಅಧಿಕಾರಿಗಳು, ಸಹಾಯಕ ಚುನಾವಣೆ ಅಧಿಕಾರಿಗಳು, ಮತಗಟ್ಟೆ ಅಧಿಕಾರಿಗಳಿಗೆ ಜೂನ್ 1ರಿಂದ ಜುಲೈ 20ರವರೆಗೆ ತರಬೇತಿ ನೀಡಲಾಗುತ್ತದೆ.

ಮತಗಟ್ಟೆ ಅಧಿಕಾರಿಗಳು ಜುಲೈ 21 ರಿಂದ ಆ.21ರ ವರೆಗೆ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಆ.22ರಿಂದ ಸೆ.29ರ ವರೆಗೆ ಮತದಾರರ ಪಟ್ಟಿ ಪರಿಷ್ಕರಣೆ, ಮತಗಟ್ಟೆಗಳ ಆಯ್ಕೆಯ ಚಟುವಟಿಕೆಗಳು ನಡೆಯಲಿವೆ. ಸೆ.30ರಿಂದ ಅ.16ರ ವರೆಗೆ ಮತದಾರರ ಪಟ್ಟಿಯ ಕರಡು ಪ್ರತಿ ಸಿದ್ಧತೆ ನಡೆಯಲಿದೆ. ಅ.17ರಂದು ಮತದಾರರ ಕರಡು ಪಟ್ಟಿ ಪ್ರಕಟಿಸಲಾಗುತ್ತದೆ. ಅ.17ರಿಂದ ನ.30ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ.

ಎರಡು ಶನಿವಾರ ಮತ್ತು ಭಾನುವಾರಗಳಂದು ವಿಶೇಷ ಅಭಿಯಾನ ನಡೆಸಲಾಗುತ್ತದೆ. ಡಿ.26ರ ವೇಳೆಗೆ ಎಲ್ಲ ಆಕ್ಷೇಪಣೆ ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುತ್ತದೆ. 2024ರ ಜ.1ರಂದು ಮತದಾರರ ಅಂತಿಮ ಪಟ್ಟಿಯನ್ನು ಮುದ್ರಣಕ್ಕೆ ಕಳುಹಿಸಲಾಗುತ್ತದೆ. ಜ.5ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.