ಬೆಂಗಳೂರು: ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ ಮಹಿಳೆಯರಿಗಾಗಿ ಸ್ಥಾಪಿಸಿರುವ ‘ಭೂಮಿಕಾ ಕ್ಲಬ್’ ವೇದಿಕೆಯು ಇದೇ ಶನಿವಾರ (ಅ.19) ಮಧ್ಯಾಹ್ನ 2.30ಕ್ಕೆ ಜಯನಗರದ ಆರ್.ವಿ.ಟೀಚರ್ಸ್ ಕಾಲೇಜು ಸಭಾಂಗಣದಲ್ಲಿ 21ನೇ ಆವೃತ್ತಿಯ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

‘ಫ್ರೀಡಂ ಆಯಿಲ್’ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ದೀಪಾವಳಿ ಹಬ್ಬದ ಸಂಭ್ರಮ ಹೆಚ್ಚಿಸಲು ಕಾರ್ಯಕ್ರಮ ಸಹಕಾರಿಯಾಗಲಿದೆ. ಅಡುಗೆ ತಯಾರಿ, ಸಂಗೀತ ಕಾರ್ಯಕ್ರಮ ಸೇರಿ ಹಲವು ವಿಶಿಷ್ಟತೆಯನ್ನು ಈ ಕಾರ್ಯಕ್ರಮವು ಒಳಗೊಂಡಿರಲಿದೆ.

ಬಾಣಸಿಗರಾದ ಪೂಜಾ ಪಾಟೀಲ ಅವರು ಅಡುಗೆ ಕಾರ್ಯಕ್ರಮ ನಡೆಸಿಕೊಡುತ್ತಾರೆ. ಅಶ್ವಿನಿ ಶೆಣೈ ಅವರು ಸೀರೆ ಉಡುವ ಕಲೆ ಮತ್ತು ಮೇಕಪ್ ಕಾರ್ಯಾಗಾರ ನಡೆಸಿಕೊಡುವರು. ಬೀಟ್ ಗುರೂಸ್ ಅವರಿಂದ ಡ್ರಮ್ ಸರ್ಕಲ್ ಕಾರ್ಯಕ್ರಮದ ಪ್ರದರ್ಶನ ನಡೆಯಲಿದೆ.

ಹೊಸ ವಿಷಯಗಳನ್ನು ಕಲಿಯಲು, ಸಮಾನ ಮನಸ್ಕರೊಂದಿಗೆ ಬೆರೆಯಲು, ಸೃಜನಶೀಲತೆ ಪ್ರದರ್ಶಿಸಲು, ಆರೋಗ್ಯ ಮತ್ತು ಕ್ಷೇಮ ಜಗತ್ತಿನ ಬಗ್ಗೆ ಮಾಹಿತಿ ಪಡೆಯಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ. ಅಚ್ಚರಿಯ ಉಡುಗೊರೆ ಗೆಲ್ಲುವ ಅವಕಾಶವೂ ಇರಲಿದೆ. ಉಚಿತ ಪ್ರವೇಶಕ್ಕೆ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ, ಹೆಸರು ನೋಂದಾಯಿಸಿಕೊಳ್ಳಬಹುದು.

ಮಾಹಿತಿಗೆ: 7338018541

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.