ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ತಿಲಕ್ನಗರ ಬಡಾವಣೆಯ ಕೊಳೆಗೇರಿಯ 65 ನಿವಾಸಿಗಳಿಗೆ ಬಿಬಿಎಂಪಿ ವತಿಯಿಂದ ಬಯೊಮೆಟ್ರಿಕ್ ಕಾರ್ಡ್ ವಿತರಿಸಲಾಯಿತು.

ತಿಲಕ್ನಗರದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಕಾರ್ಡ್ ವಿತರಿಸಿದ ಶಾಸಕ ರಾಮಲಿಂಗಾರೆಡ್ಡಿ, ‘ಕೊಳೆಗೇರಿ ನಿವಾಸಿಗಳಿಗೆ ಜಾಗದ ಹಕ್ಕುಪತ್ರ ವಿತರಣೆ ಮಾಡುವ ಬದಲು, ಇದೇ ಮೊದಲ ಬಾರಿಗೆ ಬಯೊಮೆಟ್ರಿಕ್ ಕಾರ್ಡ್ ವಿತರಿಸಿದ್ದೇವೆ. ಸರ್ಕಾರದ ಸೌಲಭ್ಯಗಳನ್ನು ಯಾವುದೇ ಅಡೆತಡೆ ಇಲ್ಲದೆ ಪಡೆಯಲು ಈ ಕಾರ್ಡ್ ನೆರವಾಗಲಿದೆ’ ಎಂದರು.

‘ಯಾವುದೇ ಕಾರಣಕ್ಕೂ ಈ ಕಾರ್ಡ್ ದುರುಪಯೋಗಪಡಿಸಿಕೊಳ್ಳಬೇಡಿ’ ಎಂದು ಅವರು ಕಿವಿಮಾತು ಹೇಳಿದರು.

‘ಜಯನಗರದ ಎಂ.ಎಸ್.ಬಿಲ್ಡಿಂಗ್ ಕಾಲೊನಿಯಲ್ಲಿ ಕೊಳೆಗೇರಿ ನಿವಾಸಿಗಳಿಗೆ 2 ಕೊಠಡಿಗಳ ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಇದಕ್ಕೆ ಕಾಲಾವಕಾಶಬೇಕು’ ಎಂದರು.

ಶಾಸಕಿ ಸೌಮ್ಯಾ ರೆಡ್ಡಿ, ‘ಜಯನಗರ ಕ್ಷೇತ್ರವನ್ನು ಕೊಳಚೆಮುಕ್ತ ಪ್ರದೇಶವನ್ನಾಗಿ ಅಭಿವೃದ್ಧಿಪಡಿಸುವುದು ನಮ್ಮ ಉದ್ದೇಶ. ಜನ ಇದಕ್ಕೆ ಪೂರಕವಾಗಿ ಸ್ಪಂದಿಸಬೇಕು’ ಎಂದು ಕೋರಿದರು.

ಕೊಳೆಗೇರಿ ನಿವಾಸಿಗಳು ತಮ್ಮ ಸಮಸ್ಯೆಗಳ ಬಗ್ಗೆ ಹೇಳಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.