ಬೆಂಗಳೂರು: ನಗರದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಬಾಂಗ್ಲಾ ವಲಸಿಗರು ಅಕ್ರಮವಾಗಿ ನೆಲಸಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರಿಗೆ ರಾಜ್ಯ ಬಿಜೆಪಿ ಒತ್ತಾಯಿಸಿದೆ.

ಅಕ್ರಮ ವಲಸಿಗರು ಆಧಾರ್, ವೋಟರ್ ಐಡಿ, ರೇಷನ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ. ಇವರಿಂದ ರಾಜ್ಯದ ಸುರಕ್ಷತೆಗೇ ಗಂಭೀರ ಸವಾಲು ಎದುರಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ನಗರದಲ್ಲಿ ಅಪರಾಧ ಪ್ರಕರಣಗಳು, ಡ್ರಗ್ಸ್ ಮಾರಾಟ ದಂಧೆ, ಕಳ್ಳಸಾಗಣೆಯಂತಹ ಪ್ರಕರಣಗಳು ಹೆಚ್ಚಾಗಿವೆ. ಇದಕ್ಕೆ ಅಕ್ರಮ ವಲಸಿಗರೇ ಕಾರಣರು. ಇವರ ವಿರುದ್ಧ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ.

ಬೆಂಗಳೂರು ಅಲ್ಲದೆ, ದಕ್ಷಿಣ ಕನ್ನಡ, ಮಂಡ್ಯ, ಕೋಲಾರ, ರಾಮನಗರ, ಮೈಸೂರು, ಬೆಳಗಾವಿ ಮುಂತಾದ ಕಡೆಗಳಲ್ಲಿ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆ ನೀಡಿರುವ ಎಚ್ಚರಿಕೆಯ ಪ್ರಕಾರ, ಅಸ್ಸಾಂನಲ್ಲಿ ಎನ್.ಆರ್.ಸಿ ವಿವಾದ ಉಂಟಾದ ಬಳಿಕ ಬಾಂಗ್ಲಾ ವಲಸಿಗರು ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಗೆ ತೆರಳಿದ್ದಾರೆ. ಇವರನ್ನು ಪತ್ತೆ ಮಾಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ.

ಈ ಸಂಬಂಧ ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್ ಅವರ ನೇತೃತ್ವದ ತಂಡ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.