ಬೆಂಗಳೂರು: ಇದೇ 15 ರಂದು ಆರಂಭವಾಗುವ ಅಧಿವೇಶನದಲ್ಲಿ ಬಿಜೆಪಿ–ಜೆಡಿಎಸ್ ಜಂಟಿಯಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ತೀರ್ಮಾನಿಸಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ಕೇಂದ್ರ ಭಾರಿ ಕೈಗಾರಿಕೆ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಬಿಜೆಪಿ– ಜೆಡಿಎಸ್ ನಾಯಕರ ಸಮನ್ವಯ ಸಮಿತಿ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ, ಈವರೆಗೆ ಬಿಜೆಪಿ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ಹೋರಾಟ ಮಾಡುತ್ತಿತ್ತು. ಇನ್ನು ಮುಂದೆ ಎನ್ಡಿಎ ಆಗಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸುತ್ತೇವೆ ಎಂದರು.

ಸರ್ಕಾರ ಪ್ರಮುಖ ಹಗರಣಗಳನ್ನು ತಾರ್ಕಿಕ ಅಂತ್ಯ ಮುಟ್ಟಿಸುವವರೆಗೆ ಹೋರಾಟ ಮುಂದುವರೆಸುತ್ತೇವೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಜನ ಛೀಮಾರಿ ಹಾಕುತ್ತಿದ್ದಾರೆ. ದಲಿತರ ಹಣ, ದಲಿತರ ಭೂಮಿಯನ್ನು ಈ ಸರ್ಕಾರ ಲೂಟಿ ಮಾಡುತ್ತಿದೆ. ಸರ್ಕಾರವನ್ನು ಮನೆಗೆ ಕಳುಹಿಸುವರೆಗೆ ಎನ್ಡಿಎ ವಿರಮಿಸುವುದಿಲ್ಲ ಎಂದು ಅಶೋಕ ಹೇಳಿದರು.

ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ವಿಷಯದಲ್ಲಿ ರಾಜ್ಯ 10 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಎಂದು ವಾಗ್ದಾಳಿ ನಡೆಸಿದರು.

ಈ ಸರ್ಕಾರ ಆರಂಭದಿಂದಲೂ ಹಗರಣಗಳಲ್ಲಿಯೇ ಮುಳುಗಿದೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ವರ್ಗಾವಣೆ ದಂಧೆ, ಪರಿಶಿಷ್ಟ ಜಾತಿ ವರ್ಗ ಹಣ ದುರ್ಬಳಕೆ, ರೈತರ ಆತ್ಮಹತ್ಯೆ ಪ್ರಕರಣಗಳು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಆರ್.ಅಶೋಕ ನೇತೃತ್ವದಲ್ಲಿ ಸದನದಲ್ಲಿ ಹೋರಾಟ ನಡೆಯಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.