ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಬುಧವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದರು.

ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಜಾಮೀನಿನ ಆದೇಶದ ಪ್ರತಿ ಮಂಗಳವಾರ ರಾತ್ರಿ ಜೈಲಾಧಿಕಾರಿಗಳಿಗೆ ತಲುಪಿದ್ದರಿಂದ ಬಿಡುಗಡೆ ಸಾಧ್ಯವಾಗಿರಲಿಲ್ಲ. ಬುಧವಾರ ಬೆಳಿಗ್ಗೆ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಮುನಿರತ್ನ ಅವರು ಜೈಲಿನಿಂದ ಹೊರಬಂದರು. ಅಲ್ಲಿಂದ ನೇರವಾಗಿ ವೈಯಾಲಿಕಾವಲ್ ನಿವಾಸಕ್ಕೆ ತೆರಳಿದರು. ಶಾಸಕರಿಗೆ ಹೂವಿನ ಮಾಲೆ ಹಾಕಿ ಬೆಂಬಲಿಗರು ಸ್ವಾಗತಿಸಿದರು.
.ಸಚಿವ ಸ್ಥಾನಕ್ಕಾಗಿ ಮುನಿರತ್ನ ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್: ಸಂತ್ರಸ್ತೆಯ ಆರೋಪ.ಬಿಜೆಪಿ ಶಾಸಕ ಮುನಿರತ್ನ ಮನೆ, ಕಚೇರಿ ಮೇಲೆ ಎಸ್ಐಟಿ ದಾಳಿ.
ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಮುನಿರತ್ನ ಸೇರಿದಂತೆ ಆರು ಮಂದಿ ವಿರುದ್ಧ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣವೂ ಸೇರಿದಂತೆ ಮುನಿರತ್ನ ವಿರುದ್ಧ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪಗಳಡಿ ದಾಖಲಾಗಿದ್ದ ಪ್ರಕರಣಗಳ ತನಿಖೆಯನ್ನೂ ರಾಜ್ಯ ಸರ್ಕಾರವು ಎಸ್ಐಟಿಗೆ ವಹಿಸಿತ್ತು. ಬಾಡಿ ವಾರಂಟ್ ಮೇಲೆ ಕಸ್ಟಡಿಗೆ ಪಡೆದಿದ್ದ ಎಸ್ಐಟಿ ಅಧಿಕಾರಿಗಳು, ಮುನಿರತ್ನ ಅವರ ವಿಚಾರಣೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.