ಬೆಂಗಳೂರು: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಯಶವಂತಪುರ ವೃತ್ತದಿಂದ ಮತ್ತಿಕೆರೆವರೆಗೆ ಮುಖ್ಯಮಂತ್ರಿ ಬಸವ
ರಾಜ ಬೊಮ್ಮಾಯಿ ನೇತೃತ್ವದಲ್ಲಿ ಶನಿವಾರ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ನಡೆಯಿತು. ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆಯೊಂದಿಗೆ ಸಾಗಿದ ಯಾತ್ರೆಯಲ್ಲಿ ಪಕ್ಷದ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಸ್ಥಳೀಯ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ಸದಸ್ಯರೂ ಆಗಿರುವ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಅ. ದೇವೇಗೌಡ, ಗೋಪಿನಾಥ ರೆಡ್ಡಿ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷೆ ಕಾವೇರಿ ಕೇದಾರನಾಥ್ ಯಾತ್ರೆಯಲ್ಲಿದ್ದರು.

ಯಶವಂತಪುರದ ಸಂವಿಧಾನ ವೃತ್ತದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖ್ಯಮಂತ್ರಿ, ಇತರ ಮುಖಂಡರ ಜತೆ ತೆರೆದ ವಾಹನದಲ್ಲಿ ನಿಂತು ಯಾತ್ರೆಯಲ್ಲಿ ಸಾಗಿದರು. ಮುಂಬರುವ ಚುನಾ
ವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಅಶ್ವತ್ಥ ನಾರಾಯಣ ಅವರುಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.