ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ಬಾಲಕಿಯರ ಹಾಸ್ಟೆಲ್‌ನಲ್ಲಿ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ 47 ವಿದ್ಯಾರ್ಥಿನಿಯರಲ್ಲಿ 46 ವಿದ್ಯಾರ್ಥಿನಿಯರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಒಬ್ಬ ವಿದ್ಯಾರ್ಥಿನಿಗೆ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ ಎಂದು ಬಿಎಂಸಿಆರ್‌ಐ ಡೀನ್ ಮತ್ತು ನಿರ್ದೇಶಕ ರಮೇಶ್ ಕೃಷ್ಣ ಕೆ. ತಿಳಿಸಿದ್ದಾರೆ.

ವಿದ್ಯಾರ್ಥಿನಿಯರು ವಾಂತಿ ಮತ್ತು ಭೇದಿ ಸಮಸ್ಯೆಯಿಂದ ಅಸ್ವಸ್ಥಗೊಂಡಿದ್ದರು. ಪರೀಕ್ಷೆ ಮಾಡಿದಾಗ ‘ಗ್ಯಾಸ್ಟ್ರೋ ಎಂಟಿರೈಟಿಸ್’ (ಜಠರ ಕರುಳಿನ ಉರಿ) ಸಮಸ್ಯೆ ಕಂಡುಬಂದಿತ್ತು ಎಂದು ಮಾಹಿತಿ ನೀಡಿದ್ದಾರೆ.

ಹಿಂದುಳಿದ ವರ್ಗದ ವಸತಿನಿಲಯವಲ್ಲ: ಅಸ್ವಸ್ಥಗೊಂಡಿರುವ ವಿದ್ಯಾರ್ಥಿನಿಯರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿನಿಲಯದವರು ಎಂದು ಹರಡಿರುವ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.