ಬೆಂಗಳೂರು: 'ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (ಬಿಎಂಐಸಿ) ಯೋಜನೆಗಾಗಿ ಜಮೀನು ಕಳೆದುಕೊಂಡ ರೈತರಿಗೆ ಪ್ರೋತ್ಸಾಹ ರೂಪದಲ್ಲಿ ಕೂಡಲೇ ನಿವೇಶನ ಹಂಚಿಕೆ ಮಾಡಬೇಕು’ ಎಂದು ಕರ್ನಾಟಕ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕೆ.ಎನ್. ಲಿಂಗೇಗೌಡ, ‘ಬಿಎಂಐಸಿ ಯೋಜನೆಗಾಗಿ ಬೆಂಗಳೂರು ಉತ್ತರ ಮತ್ತು ದಕ್ಷಿಣ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು. 2003ರ ಆ.22ರಂದು ನಡೆದ ಸಭೆಯಲ್ಲಿ ರೈತರಿಗೆ ಭೂಪರಿಹಾರ ನೀಡಲಾಗಿತ್ತು. ಇದರೊಂದಿಗೆ ನಿವೇಶನವನ್ನೂ ನೀಡುವ ಭರವಸೆ ನೀಡಲಾಗಿತ್ತು. ಅದನ್ನು ಇನ್ನೂ ಈಡೇರಿಸಿಲ್ಲ’ ಎಂದು ದೂರಿದರು.

‘ಬಿಎಂಐಸಿ ಯೋಜನೆ ಅಡಿಯಲ್ಲಿ ಸುಮಾರು 2 ಸಾವಿರ ನಿವೇಶನಗಳನ್ನು ಪ್ರೋತ್ಸಾಹದ ರೂಪದಲ್ಲಿ ಹಂಚಿಕೆ ಮಾಡಬೇಕಾಗಿದೆ. ಈ ಬಗ್ಗೆ ನೈಸ್ ಕಂಪನಿಯವರಿಗೆ ಕೇಳಿದರೆ ಸರ್ಕಾರದಿಂದ ನಮಗೆ ಅನುಮತಿ ಸಿಕ್ಕಿಲ್ಲ ಎಂಬ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರವು ಸಹ ರೈತರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.