ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ನಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಿಗೆ ಶುಕ್ರವಾರ ಚಾಲನೆ ನೀಡಲಾಯಿತು.

‘ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿತ್ಯ ಬಂದು ಹೋಗುವ ಪ್ರಯಾಣಿಕರ ಸಂಖ್ಯೆ ಸುಮಾರು 1 ಲಕ್ಷದಷ್ಟಿದೆ. ಅದರಲ್ಲಿ 14,000 ಮಂದಿ ಬಿಎಂಟಿಸಿ ಬಸ್‌ಗಳಲ್ಲೇ ಸಂಚರಿಸುವವರಾಗಿದ್ದಾರೆ. ಟರ್ಮಿನಲ್–1ಕ್ಕೆ ಈಗಾಗಲೇ ಬಿಎಂಟಿಸಿ ವಾಯು ವಜ್ರ ಬಸ್‌ಗಳ ಸಂಪರ್ಕ ಇತ್ತು. ಇನ್ನು ಮುಂದೆ ಆ ಎಲ್ಲ ಬಸ್‌ಗಳು ಟರ್ಮಿನಲ್–2ಕ್ಕೂ ಬಂದು ತೆರೆಳಲಿವೆ. 137 ವಾಯು ವಜ್ರ ಬಸ್‌ಗಳು 944 ಟ್ರಿಪ್ ಮಾಡುತ್ತಿವೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು.

‘ಮೈಸೂರು, ಮಡಿಕೇರಿ ಹಾಗೂ ಕುಂದಾಪುರ ಮಾರ್ಗದಲ್ಲಿ 13 ಫ್ಲೈಬಸ್‌ಗಳು 42 ಟ್ರಿಪ್ ಮಾಡುತ್ತಿವೆ. ಟರ್ಮಿನಲ್–2 ಪ್ರಯಾಣಿಕರಿಗೂ ಇನ್ನು ಮುಂದೆ ಉಪಯೋಗವಾಗಲಿದೆ. ದಿನದ 24 ಗಂಟೆಯೂ ಬಸ್ ಸೇವೆ ಇರಲಿದೆ’ ಎಂದು ವಿವರಿಸಿದರು.

ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ, ‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಎಲ್ಲ ಸೌಲಭ್ಯಗಳನ್ನು ಹೊಂದಿದ್ದು, ಉಳಿದ ವಿಮಾನ ನಿಲ್ದಾಣಗಳಿಗಿಂತ ವಿಭಿನ್ನವಾಗಿದೆ. ನಿರಂತರ ಬಸ್ ಸೇವೆ ಇರುವುದರಿಂದ ಇದರ ಉಪಯೋಗವನ್ನು ಪ್ರಯಾಣಿಕರು ಪಡೆಯಬೇಕು’ ಎಂದರು.

ತೂಬಗೆರೆ ಪಂಚಾಯಿತಿಗೆ ಬಸ್ ಸಂಪರ್ಕ, ಘಾಟಿ ಸುಬ್ರಮಣ್ಯ ದೇಗುಲಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಕಲ್ಪಿಸಿಕೊಡಬೇಕು ಎಂದು ಸ್ಥಳೀಯರು ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಮಾಡಿದರು.

ಬಿಬಿಎಂಪಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ, ಮುಖ್ಯ ಕಾರ್ಯನಿರ್ವಾಹಕ ಸತ್ಯಕಿ ರಘುನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ಎನ್., ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಶಾಲಿನಿ ರಾವ್, ಮುಖ್ಯ ಮಾರುಕಟ್ಟೆ ಅಧಿಕಾರಿ ಡೊಮಿನಿಕ್ ದೇವಸಿಯಾ, ವಿಶಾಲ್ ಕೆ., ಸಂಜಯ್ ಚಂದ್ರ, ಶಿವಶಂಕರ್ ಇದ್ದರು.

ವಿಮಾನ ನಿಲ್ದಾಣದ ಲಾಂಜ್‌ನಲ್ಲಿ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ, ವಾಹನಗಳ ಕಾರ್ಯಾಚರಣೆಯ ಸಮಯ, ಡಿಜಿಟಲ್ ಫಲಕಗಳು, ಸಾರ್ವಜನಿಕ ಉದ್ಘೋಷಣಾ ವ್ಯವಸ್ಥೆ ಕಲ್ಪಿಸಲಾಗಿದೆ. ಇಲ್ಲಿ 40 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಗಳಲ್ಲಿ ಸಾರ್ವಜನಿಕರಿಗೆ ಮಾಹಿತಿಯನ್ನು ಒದಗಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.