ಶಿವಮೊಗ್ಗ: 'ಬೆಂಗಳೂರಿನ ಕೆಲವು ಶಾಲೆಗಳಿಗೆ ಬಂದಿರುವ ಬಾಂಬ್ ಬೆದರಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ' ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಮಗೆ ಮಕ್ಕಳ ಸುರಕ್ಷತೆ ಮುಖ್ಯ. ಹೀಗಾಗಿ ಬೆದರಿಕೆ ಸಂದೇಶವನ್ನು ನಿರ್ಲಕ್ಷಿಸಿಲ್ಲ. ನಾನು ಬೆಂಗಳೂರು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇನೆ. ಮಾಹಿತಿ ಪಡೆದಿದ್ದೇನೆ' ಎಂದರು.

'ಈ ಹಿಂದೆ ಯಾವುದೋ ಒಂದು ಶಾಲೆಗೆ ಬೆದರಿಕೆ ಕರೆ ಇಲ್ಲವೇ ಸಂದೇಶ ಬರುತ್ತಿತ್ತು. ಈಗ ಒಂದೇ ಬಾರಿ ಹಲವು ಶಾಲೆಗಳಿಗೆ ಸಂದೇಶ ಕಳುಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಆಗುವುದಿಲ್ಲ. ಶೀಘ್ರ ಆರೋಪಿಗಳನ್ನು ಪೊಲೀಸರು ಬಂಧಿಸಲಿದ್ದಾರೆ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಒಟ್ಟು 44 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದವು.
.ಬೆಂಗಳೂರಿನ 68 ಶಾಲೆಗಳಿಗೆ ಬಾಂಬ್ ಬೆದರಿಕೆ: ಪೋಷಕರಲ್ಲಿ ಆತಂಕ.ಬೆಂಗಳೂರಿನ ಶಾಲೆಗಳಿಗೆ ಮುಜಾಹಿದ್ದಿನ್ ಹೆಸರಿನಲ್ಲಿ ಬಾಂಬ್ ಬೆದರಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.