ಬೆಂಗಳೂರು: ನಗರದ ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಬಂದಿದ್ದು, ಶೋಧ ನಡೆಸಿದ ಪೊಲೀಸರು ಇದೊಂದು ಹುಸಿ ಕರೆ ಎಂದು ಹೇಳಿದ್ದಾರೆ.

ದೊಮ್ಮಲೂರಿನಲ್ಲಿರುವ ಎನ್ಐಎ ನಿಯಂತ್ರಣ ಕೊಠಡಿಗೆ ಸೋಮವಾರ ರಾತ್ರಿ 11.30ರ ಸುಮಾರಿಗೆ ಕರೆ ಮಾಡಿದ್ದ ಅಪರಿಚಿತ, ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಸಿದ್ದ. ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳೀಯ ಪೊಲೀಸರು ರಾಜಭವನಕ್ಕೆ ಭೇಟಿ ನೀಡಿ ರಾತ್ರಿಯಿಡಿ ಶೋಧ ನಡೆಸಿದರು.

'ರಾಜಭವನದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಇದೊಂದು ಹುಸಿ ಬೆದರಿಕೆ ಎಂದು ಗೊತ್ತಾಗಿದೆ. ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕರೆ ಮಾಡಿರುವವರು ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಕೆಲ ದಿನಗಳ ಹಿಂದೆಯಷ್ಟೇ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬಂದಿದ್ದವು.
.ಶಾಲೆಗಳಿಗೆ ಬಾಂಬ್ ಬೆದರಿಕೆ: ಇಂಟರ್ಪೊಲ್, ಸಿಬಿಐಗೆ ಪತ್ರ.Video | ಬೆಂಗಳೂರಿನ ಹಲವು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.