ಬೊಮ್ಮನಹಳ್ಳಿ: ಆನೇಕಲ್ ತಾಲ್ಲೂಕಿನ ಹೆನ್ನಾಗರ ಗ್ರಾಮದಲ್ಲಿ 78 ಎಕರೆ 5 ಗುಂಟೆ ಗೋಮಾಳ ಜಮೀನು ಭೂಗಳ್ಳರ ಪಾಲಾಗುತ್ತಿದ್ದು, ಈ ಬಗ್ಗೆ 15 ದಿನಗಳ ಒಳಗಾಗಿ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆಹೈಕೋರ್ಟ್ ಆದೇಶಿಸಿದೆ.

ಎಂ.ಬಾಬು ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ನಾಗರತ್ನ ಹಾಗೂ ಹಂಚತೆ ಸಂಜೀವ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿತು.

‘ಈ ಜಮೀನಿನಲ್ಲಿ ನಿವೇಶನ ನಿರ್ಮಿಸಿ ಮಾರಾಟ ಮಾಡುತ್ತಿದ್ದು, ಅಮಾಯಕರು ನಿವೇಶನ ಖರೀದಿಸಿ, ಮೋಸ ಹೋಗುತ್ತಿದ್ದಾರೆ. ಜಮೀನು ಅತಿಕ್ರಮಣ ಆಗದಂತೆ ಬಂದೋಬಸ್ತ್ ಮಾಡುವಂತೆ ಹಾಗೂ ಇದನ್ನು ಸಸ್ಯ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲು ಆದೇಶಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿತ್ತು’.

‘ಅರಣ್ಯ ಇಲಾಖೆ ಕ್ರಮ ಕೈಗೊಳ್ಳದ ಕಾರಣ, ಸುಮಾರು ₹600 ಕೋಟಿ ಬೆಲೆ ಬಾಳುವ ಆಸ್ತಿಯನ್ನು ಭೂಗಳ್ಳರು ಕಬಳಿಸುತ್ತಿದ್ದಾರೆ, ಇದನ್ನು ಸರ್ಕಾರದ ವಶಕ್ಕೆ ಪಡೆಯಬೇಕು’ ಎಂದು ಎಂ.ಬಾಬು ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

‘ಕಂದಾಯ ದಾಖಲೆಗಳಾದ ಪ್ರಕಾರ ಈ ಜಾಗ ಗೋಮಾಳ ಎಂದು ಸ್ಪಷ್ಟಪಡಿಸಲಾಗಿದೆ. ಎಲ್ಲಮ್ಮ ದೇವಿ ದೇವಸ್ಥಾನ ಟ್ರಸ್ಟ್ ಸಂಚಾಲಕರು ಎನ್ನಲಾಗಿರುವ ಎಂ.ವಿ.ರಾಜಯ್ಯ ಅವರು ಈ ಗೋಮಾಳ ಜಾಗದಲ್ಲಿ ನಿವೇಶನಗಳನ್ನು ನಿರ್ಮಿಸಿ, ಮಾರಾಟ ಮಾಡುತ್ತಿದ್ದಾರೆ. ಇದನ್ನು ತಡೆ ಹಿಡಿಯಬೇಕೆಂದು 1995ರಲ್ಲೇ ಹೆನ್ನಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷರು ಆನೇಕಲ್ ತಾಲ್ಲೂಕಿನ ಅಂದಿನ ತಹಶೀಲ್ದಾರ್ ಅವರಿಗೆ ದೂರು ಸಲ್ಲಿಸಿದ್ದರು’.

‘ಬಳಿಕ ಸ್ಥಳ ಪರಿಶೀಲನೆ ನಡೆದು, ಜಿಲ್ಲಾಧಿಕಾರಿಗಳಿಗೆ ವರದಿ ನೀಡಿದ್ದರು. ಒತ್ತುವರಿ ಆಗಿರುವುದು, ಅಕ್ರಮವಾಗಿ ನಿವೇಶನ ಮಾಡಿರುವ ಕುರಿತು ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿತ್ತು. ಬಳಿಕಸದರಿ ಜಮೀನನ್ನು ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಲಾಗಿತ್ತು. ಆದರೆ, ಸ್ಥಳಕ್ಕೆ ಯಾವುದೇ ರಕ್ಷಣೆ ಇಲ್ಲದಿದ್ದರಿಂದ ಜಾಗ ಅತಿಕ್ರಮಣ ಆಗುತ್ತಲೇ ಇದೆ’ ಎಂದು ಎಂ.ಬಾಬು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.