ಬೆಂಗಳೂರು: ಕೆಂಗೇರಿ ಬಳಿಯ ಬಿಡಿಎ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಎರಡನೇ ಮಹಡಿಯಿಂದ ಬಿದ್ದು ಮೂರು ವರ್ಷದ ಬಾಲಕ ರಾಹುಲ್ ತೀವ್ರ ಗಾಯಗೊಂಡಿದ್ದು, ರಾಜ ರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಬಾಲಕ ರಾಹುಲ್, ಕಲಬುರಗಿಯ ಶಿವಪ್ಪ ಹಾಗೂ ಅಂಬಿಕಾ ದಂಪತಿ ಮಗ. ಕೆಲಸ ಹುಡುಕಿಕೊಂಡು ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ದಂಪತಿ, ಬಿಡಿಎ ಎನ್‌ಕ್ಲೇವ್ ಅಪಾರ್ಟ್‌ಮೆಂಟ್ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ವಾಸವಿದ್ದರು. ಶುಕ್ರವಾರ ಬೆಳಿಗ್ಗೆ 11ರ ಸುಮಾರಿಗೆ ಬಾಲಕ ರಾಹುಲ್ ಮನೆ ಎದುರು ಆಟವಾಡುತ್ತಿದ್ದ. ಇದೇ ವೇಳೆ ಕಾಲು ಜಾರಿ ಬಿದ್ದಿದ್ದ. ತಲೆಗೆ ಪೆಟ್ಟಾಗಿ ರಕ್ತ ಸೋರುತ್ತಿತ್ತು. ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.