ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ ಸ್ಥಾಪನೆಯಾಗಿ 50 ವರ್ಷಗಳು ತುಂಬಿರುವುದರಿಂದ ಡಿಸೆಂಬರ್ನಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.

ಮಹಾಸಭಾ ಕೇಂದ್ರ ಕಚೇರಿ ಗಾಯತ್ರಿ ಭವನದಲ್ಲಿ ಶುಕ್ರವಾರ ನಡೆದ ಪ್ರಮುಖ ಪದಾಧಿಕಾರಿಗಳು ಹಾಗೂ ಸಮಾಜದ ಹಿರಿಯ ಮುಖಂಡರ ಸಭೆಯಲ್ಲಿ ಈ ತೀರ್ಮಾನವನ್ನು ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಪ್ರಕಟಿಸಿದರು.

ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾರಂಭ ನಡೆಸಲು ಉದ್ದೇಶಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವವರನ್ನು ಸನ್ಮಾನಿಸಲಾಗುವುದು. ಸಮಾಜದ ಎಲ್ಲರೂ ನೆರವು ನೀಡಬೇಕು ಎಂದು ಅಶೋಕ್ ಹಾರನಹಳ್ಳಿ ಮನವಿ ಮಾಡಿದರು.

ಸಮಾವೇಶದ ಅಗತ್ಯ ಸಿದ್ಧತೆಗಳು, ರೂಪುರೇಷೆಗಳಿಗೆ ಸಂಬಂಧಿಸಿದಂತೆ ಸದ್ಯದಲ್ಲೇ ಇನ್ನೊಂದು ಸಭೆ ಕರೆದು ಚರ್ಚಿಸಲಾಗುವುದು. ಸ್ಮರಣ ಸಂಚಿಕೆ ತರಲಾಗುವುದು ಎಂದು ತಿಳಿಸಿದರು.

ಸಮಾವೇಶಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ತಿಳಿಸಿದರು.

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ, ಬೆಂಗಳೂರಿನ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೃಷ್ಣ, ಮಹಾಸಭಾದ ಸಂಸ್ಥಾಪಕ ಪದಾಧಿಕಾರಿ ಲಕ್ಷ್ಮೀನಾರಾಯಣ ಭಟ್ಟ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.