ಬೆಂಗಳೂರು: ‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಯಡಿ 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಗಳನ್ನು ಕೂಡಲೇ ಸಲ್ಲಿಸಲು ಬ್ರ್ಯಾಂಡ್ ಬೆಂಗಳೂರು ಸಮಾವೇಶ ಸಮಿತಿ ಅಧ್ಯಕ್ಷ ಜಯರಾಂ ರಾಯಪುರ ಅವರು ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಸಮಾವೇಶವನ್ನು ಆಯೋಜಿಸಲು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.

ಯೋಜನೆಯ ಅನುಷ್ಠಾನಕ್ಕಾಗಿ ಈಗಾಗಲೇ ಸಾಕಷ್ಟು ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಈಗಾಗಲೇ ಸರ್ವಪಕ್ಷಗಳ ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಲಾಗಿದೆ. ಅಲ್ಲದೆ ವಿವಿಧ ಕ್ಷೇತ್ರಗಳ ಗಣ್ಯರು, ಸ್ಥಳೀಯ ನಾಗರಿಕ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ನಿವಾಸಿ ಕ್ಷೇಮಾಭಿವೃದ್ಧಿ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಸಲಹೆ/ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರಿಂದಲೂ ವೆಬ್ ಪೋರ್ಟಲ್ ಮೂಲಕ ಬೆಂಗಳೂರಿನ ಅಭಿವೃದ್ಧಿಗಾಗಿ 7 ವಿಷಯಗಳಾದ ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನಹಿತ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್ ಬೆಂಗಳೂರು ಹಾಗೂ ಜಲಸುರಕ್ಷಾ ಬೆಂಗಳೂರು ಕುರಿತು 70 ಸಾವಿರಕ್ಕೂ ಹೆಚ್ಚು ಅಭಿಪ್ರಾಯ ಮತ್ತು ಸಲಹೆಗಳನ್ನು ಸ್ವೀಕರಿಸಲಾಗಿದೆ. ಬೆಂಗಳೂರನ್ನು ಜ್ಞಾನದ ನಗರವನ್ನಾಗಿಸುವ ನಿಟ್ಟಿನಲ್ಲಿ ‘ಶೈಕ್ಷಣಿಕ ಬೆಂಗಳೂರು’ ವಿಷಯದ ಬಗ್ಗೆ ಶಿಕ್ಷಣ ತಜ್ಞರ ಸಲಹೆ ಪಡೆಯಲಾಗಿದೆ. ಒಟ್ಟಾರೆ 8 ಪ್ರಮುಖ ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಗಳನ್ನು ಸಂಬಂಧಿಸಿದ ಶೈಕ್ಷಣಿಕ ಪಾಲುದಾರ ಸಂಸ್ಥೆಗಳು ಕೂಡಲೇ ಸಲ್ಲಿಸಲು ಸೂಚನೆ ನೀಡಲಾಯಿತು.

ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯ 8 ವಿಷಯಗಳ ಕುರಿತಾಗಿ ಸಿದ್ದಪಡಿಸಿರುವ ವರದಿಗಳ ಆಧಾರದ ಮೇಲೆ 8 ಪ್ರತ್ಯೇಕ ಪ್ರ್ಯಾತ್ಯಕ್ಷಿಕೆಗಳನ್ನು ಸಿದ್ದಪಡಿಸಿಕೊಳ್ಳಬೇಕು. ಸಾರ್ವಜನಿಕರಿಂದ ಸ್ವೀಕೃತಿಗೊಂಡಿರುವ ಅಭಿಪ್ರಾಯಗಳ ಬಗ್ಗೆ ಹಾಗೂ ತಜ್ಞರೊಂದಿಗೆ ವಿಚಾರ ವಿನಿಮಯ ನಡೆಸುವ ಬಗ್ಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾವೇಶ ಏರ್ಪಡಿಸಲಾಗುವುದು. ಈ ಸಂಬಂಧ ಅಗತ್ಯವಿರುವ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರಿಗೆ ಜಯರಾಂ ಸೂಚನೆ ನೀಡಿದರು.

ಸಭೆಯಲ್ಲಿ ಬ್ರ್ಯಾಂಡ್ ಬೆಂಗಳೂರು ಸಮಾವೇಶ ಸಮಿತಿಯ ಸದಸ್ಯರಾದ ಡಾ. ತ್ರಿಲೋಕ್ ಚಂದ್ರ, ಡಾ. ಕೆ. ಹರೀಶ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.