ಬೆಂಗಳೂರು:ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಪ್ರಯುಕ್ತ ಎಲೆಕ್ಟ್ರಾನಿಕ್ ಸಿಟಿಯ ಕಾವೇರಿ ಆಸ್ಪತ್ರೆ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಮಹಿಳಾ ಬೈಕ್ ಸವಾರರು ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿದರು.

ಕಬ್ಬನ್ ರಸ್ತೆಯಲ್ಲಿ ಆರಂಭಗೊಂಡು ಬೈಕ್ ರ್ಯಾಲಿ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಅಂತ್ಯಗೊಂಡಿತು. ಸ್ತನ ಕ್ಯಾನ್ಸರ್ ತಡೆಗಟ್ಟುವಿಕೆ, ರೋಗ ನಿರ್ಣಯ, ಚಿಕಿತ್ಸೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಎಸ್. ವಿಜಯ್ ಭಾಸ್ಕರನ್, ‘ಪಾಶ್ಚಾತ್ಯ ಜೀವನ ವಿಧಾನದಿಂದಾಗಿ ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿವೆ.ಕಳಪೆ ಆಹಾರ ಪದ್ಧತಿ, ವಾಯುಮಾಲಿನ್ಯವೂ ಕ್ಯಾನ್ಸರ್ಗೆ ಕಾರಣವಾಗುತ್ತಿದೆ. 40 ವರ್ಷದೊಳಗಿನ ಮಹಿಳೆಯರಲ್ಲಿಯೂ ಸ್ತನ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ. ಪ್ರಾರಂಭಿಕ ಹಂತದಲ್ಲಿಯೇ ರೋಗ ಪತ್ತೆ ಮಾಡಿ, ಚಿಕಿತ್ಸೆ ಒದಗಿಸಿದಲ್ಲಿ ಕಾಯಿಲೆ ವಾಸಿ ಮಾಡಬಹುದು’ ಎಂದು ಹೇಳಿದರು.

‘ಸ್ತನ ಕ್ಯಾನ್ಸರ್ ಭಾರತೀಯ ಮಹಿಳೆಯರಲ್ಲಿ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿದೆ. ಪ್ರತಿ 28 ಮಹಿಳೆಯರಲ್ಲಿ ಒಬ್ಬರಿಗೆ ತಮ್ಮ ಜೀವಿತಾವಧಿಯಲ್ಲಿ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.