ಯಲಹಂಕ: ಭಾರತೀಯ ಗಡಿಭದ್ರತಾ ಪಡೆಯ (ಸೆಡ್ಕ್‌ಕೊ-ಬಿ.ಎಸ್.ಎಫ್) ಎಲೆಕ್ಟ್ರಾನಿಕ್ಸ್ ಮತ್ತು ಡಿಜಿಟಲ್ ಕಮ್ಯುನಿಕೇಶನ್ ಕೇಂದ್ರದಲ್ಲಿ ರೇಡಿಯೊ ಆಪರೇಟರ್ ಸಿಬ್ಬಂದಿಯ ನಿರ್ಗಮನ ಪಥಸಂಚಲನ ಕಾರ್ಯಕ್ರಮ ನಡೆಯಿತು.

ತರಬೇತಿಯ ಅವಧಿಯಲ್ಲಿ ಒಳಾಂಗಣ, ಹೊರಾಂಗಣ ಸೇರಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಿಬ್ಬಂದಿಗೆ ಗಡಿಭದ್ರತಾ ಪಡೆಯ ಇನ್ಸ್‌ಪೆಕ್ಟರ್ ಜನರಲ್ ಮುಖೇಶ್ ತ್ಯಾಗಿ ಪ್ರಸಂಶನಾ ಪತ್ರ ಹಾಗೂ ಬಹುಮಾನ ವಿತರಿಸಿದರು.

ನಂತರ ಮಾತನಾಡಿದ ಅವರು, ಗಡಿಭದ್ರತಾ ಪಡೆಯ 565 ಸಿಬ್ಬಂದಿ, ರೇಡಿಯೊ ಆಪರೇಟರ್ ವಿಭಾಗದಲ್ಲಿ ತರಬೇತಿ ಪಡೆದು, ದೇಶದ ವಿವಿಧ ಭಾಗಗಳಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಳ್ಳಲು ಸಿದ್ಧರಾಗಿದ್ದಾರೆ. ದೈಹಿಕ ಮತ್ತು ಮಾನಸಿಕ ಸೇರಿದಂತೆ ವಿವಿಧ ವಿಷಯಗಳಲ್ಲಿ 40 ವಾರಗಳ ಕಠಿಣ ತರಬೇತಿ ಪಡೆದಿದ್ದಾರೆ. ಇವರೆಲ್ಲರೂ ಸುರಕ್ಷತೆ ಮತ್ತು ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.