ಬೆಂಗಳೂರು: ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆಯಲ್ಲಿ ಸೋಮವಾರ ಮುಂಜಾನೆಯಿಂದಲೇ ಬಸ್, ಲಾರಿ ಸೇರಿದಂತೆ ಭಾರಿ ವಾಹನಗಳ ಸಂಚಾರ ಆರಂಭವಾಯಿತು.

ಮೂರು ವರ್ಷಗಳ ಬಳಿಕ ಎಲ್ಲ ಮಾದರಿ ವಾಹನಗಳ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಹಾಗೂ ಬೆಂಗಳೂರು ಸಂಚಾರ ವಿಭಾಗ ಹಸಿರು ನಿಶಾನೆ ತೋರಿವೆ. ಮೊದಲ ದಿನ ಯಾವುದೇ ಅಡ್ಡಿ–ಆತಂಕವಿಲ್ಲದೇ ಎಲ್ಲ ಮಾದರಿಯ ವಾಹನಗಳು ಸುಗಮವಾಗಿ ಸಂಚರಿಸಿದವು.

ತುಮಕೂರು, ಹುಬ್ಬಳ್ಳಿ–ಧಾರವಾಡ, ದಾವಣಗೆರೆ, ಚಿತ್ರದುರ್ಗ, ಮಂಗಳೂರು, ಹಾಸನ, ಚಿಕ್ಕಮಗಳೂರು ಕಡೆಯಿಂದ ಬಂದ ಬಸ್, ಲಾರಿ ಹಾಗೂ ಟ್ರಕ್ಗಳು ಕೆನ್ನಮೆಟಲ್ (ವಿಡಿಯಾ) ಮೂಲಕ ಪೀಣ್ಯಕ್ಕೆ ಬಂದವು. ಮೆಜೆಸ್ಟಿಕ್ ಹಾಗೂ ಪೀಣ್ಯ ಕೈಗಾರಿಕಾ ಪ್ರದೇಶದಿಂದ ಬಂದ ಭಾರಿ ವಾಹನಗಳು ಪೀಣ್ಯ ಮಾರ್ಗದಿಂದ ಕೆನ್ನಮೆಟಲ್ ಕಡೆಗೆ ಚಲಿಸಿದವು.

ಎರಡೂ ಬದಿಗಳಲ್ಲಿ ಪ್ರತಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಮಾತ್ರ ಸಂಚರಿಸುವಂತೆ ಸೂಚನೆ ನೀಡಲಾಗಿದೆ. ನಿಗದಿಗಿಂತ ಹೆಚ್ಚಿನ ವೇಗದಲ್ಲಿ ಚಲಿಸುವ ವಾಹನಗಳ ಚಾಲಕರ ವಿರುದ್ಧ ಎಫ್ಐಆರ್ ದಾಖಲು ಮಾಡುವುದಾಗಿ ಸಂಚಾರ ಪೊಲೀಸರು ಎಚ್ಚರಿಸಿದ್ದಾರೆ.

ಹೊಸದಾಗಿ ಅಳವಡಿಕೆ ಮಾಡಿರುವ ಕೇಬಲ್ಗಳಿಗೆ ಸಿಮೆಂಟ್ ತುಂಬುವ ಕೆಲಸ ಪ್ರತಿ ಶುಕ್ರವಾರ ನಡೆಯಲಿದೆ. ಪ್ರತಿ ಶುಕ್ರವಾರ ಬೆಳಿಗ್ಗೆ 6ರಿಂದ ಶನಿವಾರ ಬೆಳಿಗ್ಗೆ 6ರ ತನಕ ಮೇಲ್ಸೇತುವೆಯಲ್ಲಿ ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ ಮುಂದುವರೆಯಲಿದೆ ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿಸಿದ್ದಾರೆ.

ತುಸು ತಗ್ಗಿದ ದಟ್ಟಣೆ ಸಮಸ್ಯೆ:

ಭಾರಿ ವಾಹನಗಳು ಮೇಲ್ಸೇತುವೆ ಕೆಳಗಿನ ಎರಡೂ ಬದಿಯಲ್ಲಿ ಸಂಚಾರ ನಡೆಸುತ್ತಿದ್ದುದರ ಪರಿಣಾಮ ನಾಗಸಂದ್ರ, ಎಂಟನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ, ಪೀಣ್ಯ ಜಂಕ್ಷನ್ಗಳಲ್ಲಿ ವಾಹನ ದಟ್ಟಣೆ ಉಂಟಾಗುತ್ತಿತ್ತು. ನಿರ್ಬಂಧ ತೆರವು ಆಗಿರುವುದರಿಂದ ಪ್ರಮುಖ ಜಂಕ್ಷನ್ಗಳಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗುವ ಸಾಧ್ಯತೆಯಿದೆ.

ಮೇಲ್ಸೇತುವೆಯ 8ನೇ ಮೈಲಿನ ಜಂಕ್ಷನ್ ಸಮೀಪದ 102 ಹಾಗೂ 103ನೇ ಪಿಲ್ಲರ್ನಲ್ಲಿ ಕೇಬಲ್ಗಳು ಬಾಗಿದ್ದರಿಂದ 2021ರ ಡಿಸೆಂಬರ್ನಿಂದ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ನಂತರ, ತಜ್ಞರ ಅನುಮತಿ ಪಡೆದು, ಭಾರಿ ವಾಹನಗಳ ಸಂಚಾರ ನಿಷೇಧಿಸಿ, ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಈಗ ಎಲ್ಲ ಮಾದರಿ ವಾಹನ ಸಂಚಾರ ಆರಂಭವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.