ಬೆಂಗಳೂರು: ಗಣರಾಜ್ಯೋತ್ಸವದ ದಿನ ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮ ಕಡ್ಡಾಯಗೊಳಿಸಿ ಯುಜಿಸಿ ಹೊರಡಿಸಿದ್ದ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಕ್ಯಾಂಪಸ್ ಫ್ರಂಟ್, ರಾಜ್ಯದಾದ್ಯಂತ ಕಾಲೇಜುಗಳ ಎದುರು ಬುಧವಾರ ಭಿತ್ತಿಪತ್ರ ಪ್ರದರ್ಶಿಸಿ ಸೂರ್ಯ ನಮಸ್ಕಾರ ಬಹಿಷ್ಕರಿಸಿತು.

‘ರಾಜ್ಯ ಸರ್ಕಾರವು ಸ್ವಾತಂತ್ರ್ಯ ಅಮೃತ ಮಹೋತ್ಸವದ ಹೆಸರಿನಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮ ಜಾರಿಗೊಳಿಸುವ ಮೂಲಕ ಮತೀಯ ಸಿದ್ಧಾಂತ ಜಾರಿಗೊಳಿಸಲು ಮುಂದಾಗಿದೆ’ ಎಂದು ಕ್ಯಾಂಪಸ್ ಫ್ರಂಟ್ ದೂರಿದೆ.

‘ರಾಜ್ಯದ ಹಲವು ಶಾಲೆ ಹಾಗೂ ಕಾಲೇಜುಗಳು ಮೂಲ ಸೌಕರ್ಯಗಳಿಲ್ಲದೆ ನಲುಗುತ್ತಿವೆ. ಸರ್ಕಾರವು ಅದನ್ನು ನಿವಾರಿಸುವತ್ತ ಚಿತ್ತ ಹರಿಸುವ ಬದಲುಮತೀಯ ಸಿದ್ಧಾಂತ ಜಾರಿಗೊಳಿಸುವ ಮೂಲಕ ಶಿಕ್ಷಣವನ್ನು ಕೇಸರೀಕರಣಗೊಳಿಸಲು ಮುಂದಾಗಿದೆ. ಇದು ಸಂವಿಧಾನ ವಿರೋಧಿ ನಡೆ’ ಎಂದು ಟೀಕಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.