ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಜೈಲು ಸೇರಿ 21 ದಿನಗಳ ಹಿಂದಷ್ಟೇ ಜಾಮೀನು ಮೇಲೆ ಬಿಡುಗಡೆಯಾಗಿದ್ದ ಸಲ್ಮಾನ್ ಎಂಬಾತ, ಕಾರು ಕದಿಯಲು ಯತ್ನಿಸಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ.

‘ಸದಾಶಿವನಗರ 8ನೇ ಮುಖ್ಯರಸ್ತೆಯಲ್ಲಿರುವ ಮನೆಯೊಂದರ ಮುಂದೆ ನಿಲ್ಲಿಸಿದ್ದ ಕಾರು ಕದಿಯಲು ಸಲ್ಮಾನ್ ಹಾಗೂ ಆತನ ಸಹಚರ ನವಾಜ್ ಯತ್ನಿಸಿದ್ದರು. ಅವರನ್ನು ಹಿಡಿದು ಥಳಿಸಿದ್ದ ಸಾರ್ವಜನಿಕರು, ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಕೈಗೆ ಒಪ್ಪಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಕಾರು ಕಳ್ಳತನ ಪ್ರಕರಣದಡಿ ಸಲ್ಮಾನ್ ಹಾಗೂ ನವಾಜ್‌ನನ್ನು ಬಂಧಿಸಲಾಗಿದೆ. ರೌಡಿ ಪಟ್ಟಿಯಲ್ಲಿ ಸಲ್ಮಾನ್ ಹೆಸರಿರುವ ಮಾಹಿತಿ ಇದೆ’ ಎಂದೂ ತಿಳಿಸಿವೆ.

‘ಅಪರಾಧ ಹಿನ್ನೆಲೆಯುಳ್ಳ ಸಲ್ಮಾನ್, ಕೆಲ ತಿಂಗಳ ಹಿಂದಷ್ಟೇ ಪ್ರಕರಣವೊಂದರಲ್ಲಿ ಸಿಕ್ಕಿಬಿದ್ದು ಜೈಲು ಸೇರಿದ್ದ. 21 ದಿನಗಳ ಹಿಂದೆ ಬಿಡುಗಡೆಯಾಗಿದ್ದ. ಈಗ ಮತ್ತೆ ಕೃತ್ಯ ಎಸಗಿ ಸಿಕ್ಕಿಬಿದ್ದಿದ್ದಾನೆ. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದೂ ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.