ಬೆಂಗಳೂರು: ನಗರ ಸಶಸ್ತ್ರ ಪಡೆಯ (ಸಿಎಆರ್) ಪಶ್ಚಿಮ ವಿಭಾಗದ ಹೆಡ್ ಕಾನ್‌ಸ್ಟೆಬಲ್ ಕುಮಾರ್ (38) ಎಂಬುವರು ಆತ್ಮಹತ್ಯೆ ಮಾಡಿ ಕೊಂಡಿದ್ದು, ಈ ಬಗ್ಗೆ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ದುಬಾಸಿಪಾಳ್ಯ ನಿವಾಸಿ ಕುಮಾರ್, ಉಳ್ಳಾಲದಲ್ಲಿರುವ ಸಿಎಆರ್ ಕಚೇರಿ ಯಲ್ಲಿ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.

‘ಸೋಮವಾರ ಕರ್ತವ್ಯಕ್ಕೆ ಹಾಜರಾಗಿದ್ದ ಕುಮಾರ್, ಕಚೇರಿಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಕುಮಾರ್ ಬರೆದಿದ್ದಾರೆ ಎನ್ನಲಾದ ಮರಣ ಪತ್ರ ಸ್ಥಳದಲ್ಲಿ ಸಿಕ್ಕಿದೆ’ ಎಂದೂ ತಿಳಿಸಿದರು.

‘ಜೀವನ ನಿರ್ವಹಣೆ ಹಾಗೂ ಇತರೆ ಕೆಲಸಕ್ಕಾಗಿ ಸಾಲ ಮಾಡಿಕೊಂಡಿದ್ದ ಕುಮಾರ್, ಅದನ್ನು ವಾಪಸು ತೀರಿಸಲಾಗದೇ ಸಂಕಷ್ಟಕ್ಕೆ ಸಿಲುಕಿದ್ದರು ಎಂಬುದಾಗಿ ಗೊತ್ತಾಗಿದೆ. ಸಾಲದ ವಿಷಯವನ್ನೇ ಅವರು ಮರಣಪತ್ರದಲ್ಲಿ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.