ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲಿ ಕಳ್ಳತನ ಮಾಡಿದ್ದ ಕೆಲಸದಾಕೆಯನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಳಿಮಾವು ನಿವಾಸಿ, ಮೂಲತಃ ಸೋಮವಾರಪೇಟೆಯ ರುಕ್ಮಿಣಿ (30) ಬಂಧಿತೆ.

ಆರೋಪಿಯಿಂದ ₹7 ಲಕ್ಷ ಮೌಲ್ಯದ 123 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

‘ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ನ ನಿವಾಸಿ ವೈದ್ಯೆಯ ಮನೆಯಲ್ಲಿ ರುಕ್ಮಿಣಿ ಕೇರ್ ಟೇಕರ್ ಆಗಿದ್ದು, ಅಲ್ಲಿಯೇ ವಾಸ್ತವ್ಯಕ್ಕೆ ಕೊಠಡಿ ನೀಡಲಾಗಿತ್ತು. ಮಾಲೀಕರು ಇಲ್ಲದಿದ್ದಾಗ ಚಿನ್ನಾಭರಣ ಕಳವು ಮಾಡಿದ್ದಳು’ ಎಂದು ಪೊಲೀಸರು ಹೇಳಿದರು.

‘ಕೆಲಸದಾಕೆ ಮೇಲೆ ಶಂಕೆ ವ್ಯಕ್ತಪಡಿಸಿ ಫ್ಲ್ಯಾಟ್ ಮಾಲೀಕರು ದೂರು ನೀಡಿದ್ದರು. ವಿಚಾರಣೆ ವೇಳೆ ಕೃತ್ಯ ಎಸಗಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಮೈಸೂರು, ಬೆಂಗಳೂರಿನ ವಿವಿಧೆಡೆ ಅಡವಿಟ್ಟಿದ್ದ ಆಭರಣ ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.