ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ಮೇಳೆ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಸಿ. ನಾರಾಯಣ ಗೌಡ ವಿರುದ್ಧ ಕೆ.ಆರ್.ಪೇಟೆ ಠಾಣೆ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಮತ್ತು ಪ್ರಕರಣ ಕುರಿತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಕುರಿತಂತ ಕೆ.ಸಿ.ನಾರಾಯಣ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

'ಪ್ರಕರಣವನ್ನು ಪುನಃ ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಲಾಗುತ್ತದೆ. ಮಾಹಿತಿದಾರರು ಮ್ಯಾಜಿಸ್ಟ್ರೇಟ್ ಕೊರ್ಟ್ಗೆ ಹಾಜರಾಗಿ ತನಿಖೆಗೆ ಅನುಮತಿ ನೀಡುವಂತೆ ಕೋರುವ ಹಂತದಿಂದ ಪ್ರಕರಣವನ್ನು ಹೊಸದಾಗಿ ಕಾನೂನು ಪ್ರಕಾರ ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಬೇಕು' ಎಂದು ನ್ಯಾಯಪೀಠ ನಿರ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.